ಮಡಿಕೇರಿ, ಜೂ. ೫: ಕೊಡಗು ಪ್ರೆಸ್ಕ್ಲಬ್ನ ೨೦೨೬ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭ ತಾ. ೭ ರಂದು ಬೆಳಿಗ್ಗೆ ೧೧.೩೦ ಗಂಟೆಗೆ ನಗರದ ಪತ್ರಿಕಾ ಭವನದಲ್ಲಿ ನಡೆಯಲಿದೆ ಎಂದು ಕೊಡಗು ಪ್ರೆಸ್ಕ್ಲಬ್ ಪ್ರಧಾನ ಕಾರ್ಯದರ್ಶಿ ಎಂ.ಕೆ. ಆದರ್ಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಡಗು ಪ್ರೆಸ್ಕ್ಲಬ್ ಅಧ್ಯP್ಷÀ ಬೊಳ್ಳಜಿರ ಬಿ. ಅಯ್ಯಪ್ಪ ಅಧ್ಯP್ಷÀತೆಯಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಸಮಾಜ ಸೇವಕ ಹಾಗೂ ಉದ್ಯಮಿ ಎಡಿಕೇರಿ ಪ್ರಸನ್ನ, ಕೊಡಗು ಜಿ¯್ಲÁ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯP್ಷÀ ಬಾಚರಣಿಯಂಡ ಅನು ಕಾರ್ಯಪ್ಪ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯP್ಷÀ ಅಜ್ಜಮಾಡ ರಮೇಶ್ ಕುಟ್ಟಪ್ಪ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕಿ ಬಿ.ಆರ್. ಸವಿತಾ ರೈ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದಲ್ಲಿ ಬಾಚರಣಿಯಂಡ ಅನು ಕಾರ್ಯಪ್ಪ ಅವರಿಗೆ ಪರಿಣಾಮಕಾರಿ ವರದಿ ಪ್ರಶಸ್ತಿ, ಹಿರಿಕರ ರವಿ ಅವರಿಗೆ ಪರಿಸರ ವರದಿ ಪ್ರಶಸ್ತಿ, ಸಂತೋಷ್ ರೈ ಅವರಿಗೆ ಮಾನವೀಯ ವರದಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಪ್ರಶಸ್ತಿ ಪ್ರದಾನ ಸಮಾರಂಭಕ್ಕೂ ಮುಂಚಿತವಾಗಿ ಬೆಳಿಗ್ಗೆ ೧೦.೩೦ ಗಂಟೆಗೆ ಕೊಡಗು ಪ್ರೆಸ್ಕ್ಲಬ್ ಅಧ್ಯP್ಷÀ ಬೊಳ್ಳಜಿರ ಬಿ. ಅಯ್ಯಪ್ಪ ಅವರ ಅಧ್ಯP್ಷÀತೆಯಲ್ಲಿ ವಾರ್ಷಿಕ ಮಹಾಸಭೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.