ಮಡಿಕೇರಿ, ಜೂ. ೫: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ೨೦೨೬-೨೭ನೇ ಸಾಲಿನಲ್ಲಿ ‘ಸಾಂಸ್ಕೃತಿಕ ಸೌರಭ’ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಮಟ್ಟದಲ್ಲಿ ಏರ್ಪಡಿಸಲಾಗುತ್ತಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸುವವರು ಆಕಾಶವಾಣಿಯ ಬಿ, ‘ಬಿ-ಹೈ’ ಮತ್ತು ‘ಎ’ ಗ್ರೇಡ್ ಕಲಾವಿದರು ಹಾಗೂ ಸರ್ಕಾರದಿಂದ ಕೊಡಮಾಡುವ ಪ್ರಶಸ್ತಿ ಪುರಸ್ಕೃತ ಕಲಾವಿದರಾಗಿರಬೇಕು.

ಕಾರ್ಯಕ್ರಮದಲ್ಲಿ ಭಾಗವಹಿಸುವ ಶಾಸ್ತಿçÃಯ ಸಂಗೀತ, ಕರ್ನಾಟಕ, ಹಿಂದೂಸ್ಥಾನಿ, ಗಾಯನ ವಾದ್ಯ ಸಂಗೀತ, ಸುಗಮ ಸಂಗೀತ, ವಚನ ಸಂಗೀತ, ಜನಪದ ಗೀತೆಗಳು, ಸಮೂಹ ನೃತ್ಯ, ನೃತ್ಯರೂಪಕ, ಜನಪದ ಪ್ರದರ್ಶನ ಕಲಾತಂಡ, ಗಮನಕ, ಕಥಾ ಕೀರ್ತನೆ, ನಾಟಕ, ಯಕ್ಷಗಾನ, ಮೂಡಲಪಾಯ, ಬಯಲಾಟ, ಗೊಂಬೆಮೇಳ ಇತರೆ ಕಲೆಗಳಲ್ಲಿ ಪರಿಣತಿ ಹೊಂದಿರುವ ಕಲಾವಿದರಾಗಿದ್ದು, ಪ್ರದರ್ಶಿಸಲಿರುವ ಕಲೆಯ ವಿವರವನ್ನು ಸ್ವವಿವರ ಹಾಗೂ ತಂಡದ ವಿವರಗಳನ್ನು ಪಾಸ್‌ಪೋರ್ಟ್ ಸೈಜ್ ಭಾವಚಿತ್ರ ದೊಂದಿಗೆ ಜೂನ್.೩೦ ರೊಳಗೆ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಭವನ, ಮಡಿಕೇರಿ ಇಲ್ಲಿಗೆ ಸಲ್ಲಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.