ಮಡಿಕೇರಿ, ಜೂ. ೫: ಅಕ್ರಮ ಮತದಾರರ ಗುರುತಿನ ಚೀಟಿಗಳನ್ನು ರದ್ದುಗೊಳಿಸಲು ‘ವಿಶೇಷ ತೀವ್ರ ಪರಿಷ್ಕರಣೆ’ ಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು, ಸ್ಥಳೀಯ ಆದಿಮಸಂಜಾತ ಕೊಡವರ ಚುನಾವಣಾ ಹಕ್ಕುಗಳ ರಕ್ಷಣೆ ಮಾಡಬೇಕು, ೨೦೨೭ರ ಜನಗಣತಿ ಹಾಗೂ ರಾಷ್ಟಿçÃಯ ಜಾತಿ ಗಣತಿಯಲ್ಲಿ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಂ ಒದಗಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಡಿಕೇರಿಯಲ್ಲಿ ಶಾಂತಿಯುತ ಸತ್ಯಾಗ್ರಹ ನಡೆಸಿತು.
ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆದ ಸತ್ಯಾಗ್ರಹದ ನೇತೃತ್ವ ವಹಿಸಿ ಮಾತನಾಡಿದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಮತದಾರರ ಪಟ್ಟಿಯಲ್ಲಿ ಸಂಶಯಾಸ್ಪದ ಪೌರತ್ವ ಹೊಂದಿರುವವರನ್ನು ಸೇರ್ಪಡೆಗೊಳಿಸುತ್ತಿರುವುದರಿಂದ ಕೊಡವ ಭೂಮಿಯು ದೊಡ್ಡ ಪ್ರಮಾಣದ ಜನಸಂಖ್ಯಾ ಬದಲಾವಣೆಯನ್ನು ಎದುರಿಸುತ್ತಿದೆ. ಈ ಅಕ್ರಮ ಮತದಾರರ ಗುರುತಿನ ಚೀಟಿಗಳೇ ಕೊಡವರ ರಾಜಕೀಯ ಅಸ್ತಿತ್ವದ ವಿರೂಪಕ್ಕೆ ಮೂಲ ಕಾರಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಭಾರತದ ಇತರ ರಾಜ್ಯಗಳ ಜನರು ತಮ್ಮ ತವರು ಜಿಲ್ಲೆಯಲ್ಲಿ ಮಾತ್ರವಲ್ಲದೆ ಕೊಡಗು ಜಿಲ್ಲೆಯಲ್ಲಿ ಕೂಡ ಮತದಾರರ ಗುರುತಿನ ಚೀಟಿ ಮತ್ತು ಆಧಾರ್ ಹೊಂದಿದ್ದಾರೆ. ಚುನಾವಣೆಯ ಸಮಯದಲ್ಲಿ, ಕೊಡಗಿನಲ್ಲ್ಲಿ ಮತ ಚಲಾಯಿಸುತ್ತಾರೆ. ಅಲ್ಲದೆ ತಮ್ಮ ತವರು ರಾಜ್ಯಕ್ಕೆ ಪ್ರಯಾಣಿಸಿ ಅಲ್ಲಿಯೂ ಮತದಾನ ಮಾಡುತ್ತಾರೆ.
ಲೋಕಸಭೆ ಚುನಾವಣೆ ಭಾರತ ದಾದ್ಯಂತ ೫ ರಿಂದ ೬ ಹಂತಗಳಲ್ಲಿ ನಡೆಯುತ್ತದೆ ಮತ್ತು ರಾಜ್ಯ ಚುನಾವಣೆ ಗಳು ಸಹ ವಿಭಿನ್ನ ಸಮಯಗಳಲ್ಲಿ ನಡೆಯು ತ್ತವೆ. ವಿವಿಧ ಮತದಾನದ ವೇಳಾಪಟ್ಟಿಯು ಅಂತಹ ದ್ವಿ-ಐಡಿ ಹೊಂದಿರುವ ವರಿಗೆ ಹಲವು ಬಾರಿ ಮತ ಚಲಾಯಿಸಲು ಅನುಕೂಲವನ್ನು ನೀಡುತ್ತದೆ. ಇದು “ಒಬ್ಬ ವ್ಯಕ್ತಿ, ಒಂದು ಮತ” ತತ್ವವನ್ನು ಬುಡಮೇಲು ಮಾಡುತ್ತದೆ ಮತ್ತು ಕೊಡವರ ರಾಜಕೀಯ ಪ್ರಾತಿನಿಧ್ಯವನ್ನು ವಿರೂಪಗೊಳಿಸುತ್ತದೆ ಎಂದು ಮಾಹಿತಿ ನೀಡಿದರು.
ಸುಂಟಿಕೊಪ್ಪ, ಮತ್ತಿಕಾಡು, ಸಿದ್ದಾಪುರ, ಕುಟ್ಟ ಮುಂತಾದ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲವು ವ್ಯಕ್ತಿಗಳು ವಿವಿಧ ರಾಜ್ಯಗಳು ಮತ್ತು ವಿದೇಶಗಳಿಂದ ಕಾರ್ಮಿಕರನ್ನು ದೊಡ್ಡ ಕಾರ್ಪೊರೇಟ್ ತೋಟಗಳಿಗೆ ಪೂರೈಸುತ್ತಿರುವುದು ಗಮನಕ್ಕೆ ಬಂದಿದೆ. ಈ ಪ್ರಕ್ರಿಯೆಯಲ್ಲಿ ವಲಸೆ ಕಾರ್ಮಿಕರಿಗೆ ನಕಲಿ ಆಧಾರ್ ಮತ್ತು ಮತದಾರರ ಗುರುತಿನ ಚೀಟಿಗಳನ್ನು ವ್ಯವಸ್ಥೆ ಮಾಡಲಾಗುತ್ತಿದೆ. ಪ್ರತಿ ಆಧಾರ್ಗೆ ರೂ.೨ ಸಾವಿರ ವಸೂಲಿ ಮಾಡಲಾಗುತ್ತಿದೆ. ಈ ಸಂಘಟಿತ ಜಾಲವು ಕೊಡಗಿನ ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿ ಸೇರ್ಪಡೆಗೊಳ್ಳಲು ಅನುಕೂಲ ಮಾಡಿಕೊಡುತ್ತಿದೆ ಎಂದು ಎನ್.ಯು ನಾಚಪ್ಪ ಆರೋಪಿಸಿದರು.
ಕೊಡಗಿನ ಮತದಾರರ ಪಟ್ಟಿಯನ್ನು ನೆರೆಯ ಜಿಲ್ಲೆಗಳಾದ ಚಾಮರಾಜನಗರ, ಮೈಸೂರು, ಹಾಸನ, ದಕ್ಷಿಣ ಕನ್ನಡ ಮತ್ತು ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟç, ಉತ್ತರ ಪ್ರದೇಶ, ಒಡಿಶಾ, ಬಿಹಾರ, ಅಸ್ಸಾಂ, ಪಶ್ಚಿಮ ಬಂಗಾಳ, ಜಮ್ಮು ಮತ್ತು ಕಾಶ್ಮೀರ ಮುಂತಾದ ರಾಜ್ಯಗಳೊಂದಿಗೆ ತಪಾಸಣೆಗೆ ಒಳಪಡಿಸಿ ದ್ವಿಮುಖ ನಮೂದುಗಳನ್ನು ರದ್ದುಗೊಳಿಸಬೇಕು. ಹಾಗೆಯೇ ನೇಪಾಳ, ಬಾಂಗ್ಲಾದೇಶ, ಶ್ರೀಲಂಕಾ ಮತ್ತು ಮಯಾನ್ಮಾರ್ನ ರೋಖಿನ್ ಪ್ರಾಂತ್ಯದ (ರೋಹಿಂಗ್ಯಾ) ವಿದೇಶಗಳಿಂದ ರಹಸ್ಯವಾಗಿ ಪೌರತ್ವ ಪಟ್ಟಿಗೆ ಸೇರಿದ ಅಕ್ರಮ ವಲಸಿಗರನ್ನು ತೆಗೆದು ಹಾಕಬೇಕು ಎಂದು ಆಗ್ರಹಿಸಿದರು.
ಸಂವಿಧಾನದ ವಿಧಿ ೨೫ ಮತ್ತು ೨೬ ರ ಅಡಿಯಲ್ಲಿ ಕೊಡವರ ಧಾರ್ಮಿಕ ಆಚರಣೆಯ ಅವಿಭಾಜ್ಯ ಅಂಗವಾದ ‘ತೋಕ್ ಸಂಸ್ಕಾರ ಮತ್ತು ಆಯುಧ ಹಕ್ಕನ್ನು’ ಅತ್ಯಗತ್ಯ ಧಾರ್ಮಿಕ ಆಚರಣೆ ಎಂದು ಪರಿಗಣಿಸಬೇಕು, ವಿಶ್ವಸಂಸ್ಥೆಯ ಆದಿಮಸಂಜಾತ ಆಸ್ತಿ ಹಕ್ಕುಗಳ ಅಡಿಯಲ್ಲಿ ಕೊಡವರ ಪಾರಂಪರಿಕ ಭೂಮಿಯನ್ನು ಸಂರಕ್ಷಿಸಬೇಕು. ಸಿಕ್ಕಿಂನ ‘ಸಂಘ’ ಮಾದರಿಯಲ್ಲಿ ಕೊಡವರಿಗಾಗಿ ಪ್ರತ್ಯೇಕ ಸಂಸತ್ ಮತ್ತು ವಿಧಾನಸಭಾ ಕ್ಷೇತ್ರವನ್ನು ಮರುವಿಂಗಡಿಸಬೇಕು. ಕೊಡವ ಪರಂಪರೆಯನ್ನು ಯುನೆಸ್ಕೋದ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪಟ್ಟಿಗೆ ಮತ್ತು ‘ದೇವಟ್ ಪರಂಬ್’ ಜನಾಂಗೀಯ ಹತ್ಯಾಕಾಂಡವನ್ನು ವಿಶ್ವಸಂಸ್ಥೆಯ ಹೋಲೋಕಾಸ್ಟ್ ಸ್ಮರಣಾರ್ಥ ಪಟ್ಟಿಗೆ ಸೇರಿಸಬೇಕು ಎಂದು ಎನ್.ಯು ನಾಚಪ್ಪ ಒತ್ತಾಯಿಸಿದರು.
ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ರಾಷ್ಟçಪತಿಗಳು, ಪ್ರಧಾನಮಂತ್ರಿಗಳು, ಗೃಹ ಸಚಿವರು, ಅಧ್ಯಕ್ಷರು, ಜನಸಂಖ್ಯಾ ಬದಲಾವಣೆ ಕುರಿತ ಉನ್ನತ ಮಟ್ಟದ ಸಮಿತಿ, ಜನಗಣತಿ ಆಯುಕ್ತರು ಹಾಗೂ ಮುಖ್ಯ ಚುನಾವಣಾಧಿಕಾರಿಗಳಿಗೆ ಸಲ್ಲಿಸಲಾಯಿತು.
ಈ ಸಂದರ್ಭ ಚೋಳಪಂಡ ಜ್ಯೋತಿ ನಂಜಪ್ಪ, ಲೆಫ್ಟಿನೆಂಟ್ ಕರ್ನಲ್ ಬಿ.ಎಂ ಪಾರ್ವತಿ, ಮುದ್ದಿಯಡ ಲೀಲಾವತಿ, ಮೆ|| ಅಳಮಂಡ ಜೈ ಗಣಪತಿ, ಪಟ್ಟಮಾಡ ಕುಶ, ನಂದೇಟಿರ ರವಿ ಸುಬ್ಬಯ್ಯ, ಮಂದಪAಡ ಮನೋಜ್ ಮಂದಣ್ಣ, ಕಿರಿಯಮಾಡ ಶೇರಿನ್, ಅರೇಯಡ ಗಿರೀಶ್, ಅಪ್ಪಾರಂಡ ಪ್ರಸಾದ್ ಕುಶಾಲಪ್ಪ, ಪುದಿಯೋಕ್ಕಡ ಕಾಶಿ ಕರುಂಬಯ್ಯ, ಮಣವಟ್ಟಿರ ಚಿಣ್ಣಪ್ಪ, ಪುದಿಯೋಕ್ಕಡ ಪೃಥ್ವಿ, ಪುಟ್ಟಿಚಂಡ ಡಾನ್ ದೇವಯ್ಯ, ಬೇಪಡಿಯಂಡ ಬಿದ್ದಪ್ಪ, ಸಾದೆರ ರಮೇಶ್, ಪಾಲೇಕಂಡ ಪ್ರಧಾನ್ ಪೂಣಚ್ಚ, ಚೋಳಪಂಡ ನಾಣಯ್ಯ, ನಂದಿನೆರವAಡ ಮಿಟ್ಟು ಅಪ್ಪಯ್ಯ, ನಂದಿನೆರವAಡ ಅಯ್ಯಣ್ಣ, ಚೊಕ್ಕಂಡ ಕಟ್ಟಿ, ಅಚ್ಚಕಾಳೇರ ನವೀನ್ ಮೊಣ್ಣಪ್ಪ, ಕೂತಂಡ ರೋಷನ್ ಮತ್ತಿತರರು ಪಾಲ್ಗೊಂಡಿದ್ದರು.
ಜಿಲ್ಲಾಡಳಿತದ ಪರವಾಗಿ ಅಪರ ಜಿಲ್ಲಾಧಿಕಾರಿ ಡಾ.ಸಹನಾ ಆದಿಮನಿ ಅವರು ಜ್ಞಾಪನಾ ಪತ್ರವನ್ನು ಸ್ವೀಕರಿಸಿದರು.