ಐಗೂರು, ಜೂ.೬: ಸರಕಾರಿ ಹಿರಿಯ ಪ್ರಾಥಮಿಕ ಕಾಜೂರು ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಇಕೋ ಕ್ಲಬ್ ವತಿಯಿಂದ ಸಸಿಗಳನ್ನು ನೆಡುವ ಮೂಲಕ ಆಚರಿಸಲಾಯಿತು.

ಲಯನ್ಸ್ ಸಂಸ್ಥೆಯ ಮಾಜಿ ಅಧ್ಯಕ್ಷರಾದ ರೋಹಿತ್ ಹಾಗೂ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಯೋಗೇಶ್ ಅವರು ಪರಿಸರದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಸರಳ ಕುಮಾರಿ, ಪ್ರೌಢಶಾಲಾ ವಿಭಾಗದ ಆಡಳಿತ ಮಂಡಳಿಯ ಬಾರನ ಭರತ್ ಕುಮಾರ್, ಶಿಕ್ಷಕ ಸತೀಶ್ ಕುಮಾರ್, ಹಳೆಯ ವಿದ್ಯಾರ್ಥಿ ಸಂಘದ ರವಿ, ಶಿಕ್ಷಕಿಯರಾದ ಅನಸೂಯ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.