ಕುಶಾಲನಗರ, ಜೂ.೬: ಕುಶಾಲನಗರ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ರಾಜ್ಯ ಸಂಚಾಲಕರಾದ ಎಂ.ಎನ್ ಚಂದ್ರಮೋಹನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿದ್ಯಾರ್ಥಿಗಳಿಗೆ ದಿನದ ಮಹತ್ವದ ಬಗ್ಗೆ ಮಾಹಿತಿ ಒದಗಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ನಾಗೇಂದ್ರ ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರುದ್ರಪ್ಪ, ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ಮಂಜುನಾಥ್, ಉಪನ್ಯಾಸಕಿ ಸೌಮ್ಯ ಮತ್ತಿತರರು ಇದ್ದರು.