ನಾಪೋಕ್ಲು, ಜೂ.೬: ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ವತಿಯಿಂದ ಕಾರುಗುಂದ ಗೌಡ ಸಮಾಜದ ಆವರಣದಲ್ಲಿ ಗಿಡ ನೆಡುವುದರೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಅವರು ಕಾರ್ಯಕ್ರಮದ ನೇತೃತ್ವ ವಹಿಸಿ ದಿನದ ಮಹತ್ವದ ಬಗ್ಗೆ ಮಾತನಾಡಿದರು.

ಈ ಸಂದರ್ಭ ಒಕ್ಕೂಟದ ಉಪಾಧ್ಯಕ್ಷೆ ಹೊಸೋಕ್ಲು ಲತಾ ಮೊಣ್ಣಪ್ಪ, ಕಾರ್ಯದರ್ಶಿ ಕೇಕಡ ಪೂಜಾ ನಾಗೇಂದ್ರ, ಕೋಶಾಧಿಕಾರಿ ಕೊಡಪಾಲು ತೀರ್ಥ ಗಣಪತಿ, ಸಂಘಟನಾ ಕಾರ್ಯದರ್ಶಿ ಬೈಮನ ಜ್ಯೋತಿ ತಿಮ್ಮಯ್ಯ, ನಿವೃತ್ತ ಶಿಕ್ಷಕಿ ಪಾಣತ್ತಲೆ ತಾರಾಮಣಿ, ಬೈಮನ ಕಾಂತಿ ದಯಾನಂದ ಸೇರಿದಂತೆ ಒಕ್ಕೂಟದ ನಿರ್ದೇಶಕರು ಪಾಲ್ಗೊಂಡಿದ್ದರು.