ವೀರಾಜಪೇಟೆ, ಜೂ.೬: ಪರಿಸರದಿಂದ ಎಲ್ಲವನ್ನು ಪಡೆದುಕೊಳ್ಳುವ ಮಾನವ ಪರಿಸರಕ್ಕೆ ಏನಾದರೂ ಕೊಡುಗೆ ನೀಡುವಂತಾಗಬೇಕು ಎಂದು ೨ನೇ ಅಪರ ಜಿಲ್ಲಾ ಸತ್ರ ನ್ಯಾಯಾಧೀಶ ರಾದ ಎಸ್. ನಟರಾಜ್ ಹೇಳಿದರು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವೀರಾಜಪೇಟೆ ತಾಲೂಕು ಕಾನೂನು ಸೇವೆಗಳ ಸಮಿತಿ, ವೀರಾಜಪೇಟೆ ವಲಯ ಅರಣ್ಯ ಇಲಾಖೆ, ಸರಕಾರಿ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ಕಾಲೇಜಿನ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯರು ಆರೋಗ್ಯವಾಗಿರಬೇಕಾದರೆ ಪರಿಸರ ಆರೋಗ್ಯವಾಗಿರಬೇಕು. ಭೂಮಿ ಇರುವುದು ಮನುಷ್ಯರಿಗೆ ಮಾತ್ರವಲ್ಲ. ಎಲ್ಲಾ ಜೀವಿಗಳಿಗೂ, ಪಕ್ಷಿ ಪ್ರಾಣಿಗಳಿಗೂ, ಗಿಡ ಮರಗಳಿಗೂ ಹಕ್ಕು ಇದೆ. ಆದ್ದರಿಂದ ಭೂಮಿಯನ್ನು ಕಾಪಾಡುವಂತಾಗಬೇಕು ಎಂದರು.
ಇತ್ತೀಚಿನ ದಿನಗಳಲ್ಲಿ ಎಲ್ಲಾ ವಸ್ತು, ಸಾಮಗ್ರಿಗಳನ್ನು ಕೊಂಡುಕೊಳ್ಳುವ ಸಂದರ್ಭ ಪಟ್ಟಣ ಹಾಗೂ ಇತರೆಡೆಗಳಲ್ಲಿ ಪ್ಲಾಸ್ಟಿಕ್ ಬ್ಯಾಗ್ ಬಳಸುತ್ತಿರುವುದರಿಂದ ಪರಿಸರಕ್ಕೆ ಹಾನಿ ಉಂಟಾಗುತ್ತಿದೆ. ಪ್ಲಾಸ್ಟಿಕ್ ಬಳಕೆ ನಿಷೇದಧ ಮಾಡಬೇಕಾಗಿದೆ. ಪರಿಸರ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಗಿಡ ನೆಡುವ ಮೂಲಕ ಮರಗಳನ್ನು ಬೆಳೆಸುವಂತಾಗಬೇಕು. ಪರಿಸರ ಸಂರಕ್ಷಣೆ ಎಲ್ಲರ ಕರ್ತವ್ಯವಾಗಿದೆ ಎಂದರು.
ಪ್ರಾಸ್ತಾವಿಕವಾಗಿ ಅರಣ್ಯ ಸಹಾಯಕ ಸಂರಕ್ಷಣಾಧಿಕಾರಿಗಳಾದ ತಹಸೀನ್ ಬಾನು ಅವರು ಮಾತನಾಡಿ, ಅರಣ್ಯವನ್ನು ಉಳಿಸಿ ಬೆಳೆಸಬೇಕು. ಪ್ರಾಣಿ-ಪಕ್ಷಿಗಳಿಗೆ, ಜೀವ ರಾಶಿಗಳಿಗೂ ಅರಣ್ಯ ಆಶ್ರಯವಾಗಿದೆ ಎಂದರು. ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಎ. ವಿಶ್ವನಾಥ್, ವೀರಾಜಪೇಟೆ ತಹಶೀಲ್ದಾರ್ ಪ್ರವೀಣ್ ಕುಮಾರ್, ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರೇಮಂಡ್, ವಕೀಲರ ಸಂಘದ ಅಧ್ಯಕ್ಷ ಸಿ.ಕೆ ಪೂವಣ್ಣ, ವಕೀಲ ವಿ.ಪಿ ರಮೇಶ್ ಅವರುಗಳು ಸಭೆಯನ್ನುದ್ದೇಶಿಸಿ ಮಾತನಾಡಿದರು.
ವಲಯ ಅರಣ್ಯಧಿಕಾರಿ ಕೆ.ವಿ ಶಿವರಾಮ್, ಉಪವಲಯ ಅರಣ್ಯಾಧಿಕಾರಿಗಳು, ಸಿಬ್ಬಂದಿ ಗಳು, ಶಾಲಾ ಮಕ್ಕಳು, ಶಾಲೆಯ ಶಿಕ್ಷಕಿ ಅನಿತ ನೂರೊನಾ ಇದ್ದರು.ಕುಶಾಲನಗರ, ಜೂ.೬: ಕುಶಾಲನಗರ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಅರಣ್ಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕುಶಾಲನಗರ ಅರಣ್ಯ ನಾಟಾ ಸಂಗ್ರಹಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಗಿಡನೆಡುವ ಮೂಲಕ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರೂ ಆದ ಚೈತ್ರ ಎಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಈ ಸಂದರ್ಭ ಕುಶಾಲನಗರ ವಕೀಲರ ಸಂಘದ ಉಪಾಧ್ಯಕ್ಷ ಕೆ.ಎಸ್ ವೆಂಕಟರಮಣ ರಾವ್, ಕಾರ್ಯದರ್ಶಿ ಕೆ.ಬಿ ಮೋಹನ್, ನವೀನ್, ಮೋಹನ್ ಕುಮಾರ್, ವಲಯ ಅರಣ್ಯ ಅಧಿಕಾರಿ ರಕ್ಷಿತ್, ಡಿ.ಆರ್.ಎಫ್.ಓ. ಜಗದೀಶ್ ಮತ್ತು ವೆಂಕಟೇಶ್ ಸೇರಿದಂತೆ ನ್ಯಾಯಾಂಗ ಇಲಾಖೆ ಸಿಬ್ಬಂದಿಗಳು, ಅರಣ್ಯ ಇಲಾಖೆ ಸಿಬ್ಬಂದಿಗಳು, ಪೊಲೀಸ್ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ವೀರಾಜಪೇಟೆ, ಜೂ. ೬: ವೀರಾಜಪೇಟೆ ಪುರಸಭೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ ಮಾಡಲಾಯಿತು. ಪುರಸಭೆಯ ಆವರಣದಲ್ಲಿ ವಿವಿಧ ಸಸಿಗಳನ್ನು ನೆಡುವ ಮೂಲಕ ಪರಿಸರ ದಿನ ಆಚರಣೆಗೆ ಚಾಲನೆ ನೀಡಲಾಯಿತು.
ಈ ಸಂದರ್ಭ ಪುರಸಭೆ ಮುಖ್ಯಾಧಿಕಾರಿ ಪಿ.ಕೆ. ನಾಚಪ್ಪ, ವ್ಯವಸ್ಥಾಪಕಿ ಸುಜಾತಾ, ಆರೋಗ್ಯ ಅಧಿಕಾರಿ ಕೋಮಲ, ಕಂದಾಯ ಅಧಿಕಾರಿ ಸೋಮೇಶ್, ಪುರಸಭೆ ಸಿಬ್ಬಂದಿಗಳು, ಪೌರಕಾರ್ಮಿಕರು ಪಾಲ್ಗೊಂಡಿದ್ದರು.ಕೂಡಿಗೆ, ಜೂ.೬: ಕುಶಾಲನಗರ ತಾಲೂಕಿನ ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಅರಣ್ಯ ಇಲಾಖೆ, ಶಾಲೆಯ ಇಕೋ ಕ್ಲಬ್ ಹಾಗೂ ಭಾರತ್ ಸ್ಕೌಟ್ಸ್-ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಏರ್ಪಡಿಸಲಾಗಿತ್ತು.
ಪರಿಸರ ಕಾರ್ಯಕ್ರಮದಲ್ಲಿ ಶಾಲಾವರಣದಲ್ಲಿ ಅರಣ್ಯ ಗಿಡನೆಟ್ಟು ಪರಿಸರ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಭಾರತ್ ಸ್ಕೌಟ್ಸ್-ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ.ಪ್ರವೀಣ್ ದೇವರಗುಂಡ ಸೋಮಪ್ಪ ಮಾತನಾಡಿ, ಪ್ರತಿಯೊಬ್ಬರೂ ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ತೊಡಗಿದಾಗ ಮಾತ್ರ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನೀಡಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಪ್ರಸ್ತುತ ಜಗತ್ತಿನಲ್ಲಿ ಆಧುನಿಕತೆ, ಜಾಗತೀಕರಣ, ನಗರೀಕರಣ, ಕೈಗಾರೀಕರಣ ಹಾಗೂ ಮುಂತಾದ ಹತ್ತು ಹಲವು ಅಭಿವೃದ್ಧಿ ಕಾರಣಗಳಿಂದ ಪರಿಸರಕ್ಕೆ ತೀವ್ರ ಧಕ್ಕೆಯುಂಟಾಗುತ್ತಿದೆ. ಈ ದಿಸೆಯಲ್ಲಿ ಪ್ರತಿಯೊಬ್ಬರೂ ಪರಿಸರವನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿಸಿಕೊಂಡರೆ ಉತ್ತಮ ಪರಿಸರ ನಿರ್ಮಾಣ ಮಾಡಲು ಸಾಧ್ಯ ಎಂದರು. ಪರಿಸರ ಸಂರಕ್ಷಣೆಯ ಮಹತ್ವ ಕುರಿತು ಮಾಹಿತಿ ನೀಡಿದ ಜಿಲ್ಲಾ ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಚಾಲಕರೂ ಆದ ಶಾಲಾ ಮುಖ್ಯ ಶಿಕ್ಷಕ ಟಿ.ಜಿ ಪ್ರೇಮಕುಮಾರ್, ನಾವು ಸ್ವಚ್ಛ, ಹಸಿರು, ಸುಂದರ ಮತ್ತು ಆರೋಗ್ಯವಂತ ಹಾಗೂ ಸುಸ್ಥಿರ ಪರಿಸರ ನಿರ್ಮಾಣಕ್ಕಾಗಿ ಸಂಘಟಿತ ಪ್ರಯತ್ನಪಡಬೇಕು ಎಂದರು. ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿದ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ ದಯಾನಂದ ಪ್ರಕಾಶ್ ಮಾತನಾಡಿ, ನಾವು ನೆಲ-ಜಲ, ಅರಣ್ಯ, ಪರಿಸರ ಸಂರಕ್ಷಣೆಗೆ ಒತ್ತು ನೀಡಬೇಕು ಎಂದರು.ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಕುರಿತು ಶಾಲೆಯ ಹಿರಿಯ ಶಿಕ್ಷಕ ಕೆ.ಗೋಪಾಲಕೃಷ್ಣ ಮಾಹಿತಿ ನೀಡಿದರು. ಶಿಕ್ಷಕಿಯರಾದ ಬಿ.ಎನ್ ಸುಜಾತ, ಎಸ್.ಎಂ ಗೀತಾ, ಬಿ.ಎಸ್ ಅನ್ಸಿಲಾ ರೇಖಾ, ವಿದ್ಯಾರ್ಥಿಗಳು ಇದ್ದರು.