ಮಡಿಕೇರಿ, ಜೂ.೬ : ಕೊಡಗು ಜಿಲ್ಲೆಯಲ್ಲಿ ಮುಂದಿನ ಮಳೆಗಾಲದ ದಿನಗಳಲ್ಲಿ ನದಿಪಾತ್ರಗಳಲ್ಲಿ ನೀರಿನ ಹರಿವು ಹೆಚ್ಚಾಗಲಿದ್ದು, ಸಾರ್ವಜನಿಕರ ಸುರಕ್ಷತೆಯ ಮತ್ತು ಸಾರ್ವಜನಿಕ ಆಸ್ತಿ ಪಾಸ್ತಿಗಳ ರಕ್ಷಣೆಯ ಹಿತದೃಷ್ಟಿಯಿಂದ ಮರಳುಗಾರಿಕೆ, ಮರದ ದಿಮ್ಮಿಗಳ ಸಾಗಾಣೆ ಮತ್ತು ಇತರೆ ಸರಕು ಸಾಗಾಣಿಕೆಯನ್ನು ಕೊಡಗು ಜಿಲ್ಲೆಯಾದ್ಯಂತ ಮಳೆಗಾಲ ಪ್ರಾರಂಭವಾದಾಗಿನಿAದ ಮಳೆಗಾಲ ಮುಕ್ತಾಯವಾಗುವವರೆಗೆ ನಿರ್ಭಂದಿಸುವ ಬಗ್ಗೆ ತೀರ್ಮಾನಿಸಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಹೆಚ್ಚಾಗುವ ದಿನಗಳಲ್ಲಿ ರಸ್ತೆಯ ಪರಿಸ್ಥಿತಿ ಹದಗೆಡುತ್ತದೆಯಲ್ಲದೆ ಅಧಿಕ ಭಾರ ತುಂಬಿದ ಭಾರೀ ಸರಕು ಸಾಗಾಣೆ ವಾಹನಗಳು ದಿನನಿತ್ಯ ಸಂಚರಿಸುವುದರಿAದ ರಸ್ತೆಯ ಬದಿಗಳ ಮಣ್ಣು ಕುಸಿತದಿಂದಾಗಿ ರಸ್ತೆ ಸಂಚಾರಕ್ಕೆ ತೊಂದರೆಯಾಗಿ ಸಾಕಷ್ಟು ಅಪಘಾತಗಳಿಗೆ ಕಾರಣವಾಗುತ್ತದೆ. ಆದ್ದರಿಂದ ವಾಹನ ಸವಾರರ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಕೊಡಗು ಜಿಲ್ಲೆಯಾದ್ಯಂತ ಜೂನ್ ೧೦ ರಿಂದ ಜುಲೈ ೯ ರವರೆಗೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
ಎಲ್ಲಾ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಾಣಿಕೆ ವಾಹನಗಳು, ವಾಹನದ ನೋಂದಣಿ ತೂಕ ೧೮,೫೦೦ ಕೆ.ಜಿ.ಗಿಂತ ಹೆಚ್ಚಿನ ಸರಕು ಸಾಗಾಣೆ ಮಾಡುವ ಸರಕು ಸಾಗಾಣಿಕೆ ವಾಹನಗಳು, ಭಾರೀ ವಾಹನಗಳಾದ ಬುಲೆಟ್ ಟ್ಯಾಂರ್ಸ್, ಶಿಪ್ ಕಾರ್ಗೋ ಕಂಟೈರ್ಸ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ವಾಹನಗಳು/ ರ್ಟಿಕ್ಯೂಲೇಟೆಡ್ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ.
ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನ (ಮಲ್ಟಿ ಆಕ್ಸಿಲ್ ಬಸ್ಗಳು ಸೇರಿದಂತೆ)ಗಳಿಗೆ ನಿರ್ಬಂಧದಿAದ ವಿನಾಯಿತಿ ನೀಡಲಾಗಿದೆ. ಈ ಬಗ್ಗೆ ಮೋಟಾರು ವಾಹನ ಕಾಯ್ದೆ ೧೯೮೮ ರ ಸೆಕ್ಷನ್ ೧೧೬ ರಂತೆ ಅವಶ್ಯವಿರುವ ಸಂಜ್ಞೆ/ ಸೂಚನಾ ಫಲಕ ಅಳವಡಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ, ಇವರಿಗೆ ಅನುಮತಿಸಿದೆ. ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಕೊಡಗು ಜಿಲ್ಲೆಯ ಮುಖಾಂತರ ಹಾದುಹೋಗುವ ರಾಷ್ಟಿçÃಯ ಹೆದ್ದಾರಿ ೨೭೫ ರ ಜಿಲ್ಲೆಯ ಗಡಿಭಾಗಗಳಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ವ್ಯವಸ್ಥಿತ ಚೆಕ್ಪೋಸ್ಟ್ ನಿರ್ಮಿಸಿ, ದಿನದ ೨೪ ಗಂಟೆಯೂ ನಿಗಾ ವಹಿಸಲು ಸಿಬ್ಬಂದಿಯನ್ನು ನಿಯೋಜಿಸಲು, ಮೊಬೈಲ್ ಪ್ಯಾಟ್ರೋಲಿಂಗ್ ನಡೆಸಲು ಹಾಗೂ ಈ ಆದೇಶ ಉಲ್ಲಂಘನೆಯಾಗದAತೆ ಮತ್ತು ಆದೇಶ ಉಲ್ಲಂಘಿಸಿದವರ ವಿರುದ್ದ ನಿಯಮಾನುಸಾರ ಕ್ರಮ ಕೈಗೊಳ್ಳಲು ಆರಕ್ಷಕ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.