ಮಡಿಕೇರಿ, ಜೂ.೬: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ೧೮ ವರ್ಷ ಮೇಲ್ಪಟ್ಟ ಎಲ್ಲಾ ಮತದಾರರು ಈ ಕಾರ್ಯಕ್ಕೆ ಸಹಕರಿಸುವಂತೆ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇರ್ ಮನವಿ ಮಾಡಿಕೊಂಡಿದ್ದಾರೆ.

ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು; ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಯನ್ನು ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ ಮತ್ತು ಪಾರದರ್ಶಕವಾಗಿ ಪೂರ್ಣಗೊಳಿಸಲು ಎಲ್ಲರೂ ಸಹಕಾರ ನೀಡಬೇಕು. ಭಾರತ ಚುನಾವಣಾ ಆಯೋಗವು ವಿಶೇಷ ಸಮಗ್ರ ಪರಿಷ್ಕರಣೆಗೆ ಅರ್ಹತಾ ದಿನಾಂಕ ೨೦೨೬ ಅಕ್ಟೋಬರ್ ೧ ನ್ನು ಘೋಷಿಸಿದ್ದು, ಜೂ.೨೦ ರಿಂದ ೨೯ರ ವರೆಗೆ ಪೂರ್ವತಯಾರಿ, ತರಬೇತಿ ಮತ್ತು ಮುದ್ರಣಕ್ಕೆ ಅವಕಾಶ ಕಲ್ಪಿಸಿದೆ. ಜೂ.೩೦ ರಿಂದ ಜು.೨೯ರ ವರೆಗೆ ಮತಗಟ್ಟೆ ಅಧಿಕಾರಿಯಿಂದ ಮನೆಮನೆ ಭೇಟಿ ಹಾಗೂ ಮತಗಟ್ಟೆಗಳ ಪುನರ್ ವಿಂಗಡಣೆ ಕಾರ್ಯ ಆಗಸ್ಟ್ ೫ ರಂದು ಕರಡು ಮತದಾರರ ಪಟ್ಟಿ ಪ್ರಕಟಗೊಳ್ಳಲಿದೆ. ಆ.೫ ರಿಂದ ಸೆ.೪ರ ವರೆಗೆ ಹಕ್ಕು ಮತ್ತು ಆಕ್ಷೇಪಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಿದೆ. ಜೊತೆಗೆ ಆ.೫ ರಿಂದ ಅಕ್ಟೋಬರ್ ೩ ರವರೆಗೆ ಸೂಚನೆ ಹಂತ, ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ನಡೆಯಲಿದೆ. ಅಕ್ಟೋಬರ್ ೭ ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಪೂರ್ವ ಪರಿಷ್ಕರಣೆ ಚಟುವಟಿಕೆಗಳ ಸಮಯದಲ್ಲಿ ಜಿಲ್ಲೆಯ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಪ್ರತಿ ಮನೆಗೂ ಭೇಟಿ ನೀಡಿ ಪರಿಶೀಲನೆ ಮಾಡಲಿದ್ದಾರೆ. ಈ ಸಮಯದಲ್ಲಿ ಸಾರ್ವಜನಿಕರು ಯಾವುದೇ ರೀತಿಯ ತಿದ್ದುಪಡಿಗಳು, ಹೆಸರು ನೋಂದಣಿ, ಮೃತ ಮತ್ತು ಸ್ಥಳಾಂತರಗೊAಡ ಮತದಾರರ ಹೆಸರುಗಳ ತೆಗೆದು ಹಾಕುವಿಕೆ ಮತ್ತು ಮುಂಬರುವ ಅರ್ಹತಾ ದಿನಾಂಕಗಳAತೆ ೧೮ ವರ್ಷ ತುಂಬುವ ಯುವ ಮತದಾರರ ಹೆಸರು ಸೇರ್ಪಡೆ ಕುರಿತು ಅರ್ಜಿ ಸಲ್ಲಿಸಬಹುದು. ಈಗಾಗಲೇ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಜಿಲ್ಲಾ ಚುನಾವಣಾಧಿಕಾರಿಗಳು, ತಹಶೀಲ್ದಾರರು ಮತ್ತು ತಾಂತ್ರಿಕ ಸಿಬ್ಬಂದಿಗೆ ಐಟಿ ಅಪ್ಲಿಕೇಶನ್‌ಗಳ ಬಗ್ಗೆ ತರಬೇತಿ ನೀಡಲಾಗುತ್ತದೆ. ಬೂತ್ ಮಟ್ಟದ ಅಧಿಕಾರಿಗಳಿಗೆ ಮತದಾರರ ನೋಂದಣಾಧಿಕಾರಿಗಳಿAದ ತರಬೇತಿ ನೀಡಲಾಗುತ್ತದೆ ಎಂದು ವಿವರಿಸಿದರು. .

ಪೂರ್ವ ಮಾಹಿತಿಯುಳ್ಳ ಗಣತಿ ನಮೂನೆಗಳನ್ನು ಮುದ್ರಿಸಿ ಸರಬರಾಜು ಮಾಡಲಾಗುತ್ತದೆ. ಮನೆ-ಮನೆ ಭೇಟಿ ಹಂತ ಸಂದರ್ಭ ಬೂತ್ ಮಟ್ಟದ ಅಧಿಕಾರಿಗಳು ಪ್ರತಿ ಮನೆಗೆ ಭೇಟಿ ನೀಡಿ, ಪೂರ್ವ ಮಾಹಿತಿಯುಳ್ಳ ಗಣತಿ ನಮೂನೆಯನ್ನು ದ್ವಿಪ್ರತಿಯಲ್ಲಿ ವಿತರಿಸಿ, ಅವುಗಳನ್ನು ಭರ್ತಿ ಮಾಡಲು ಮಾರ್ಗದರ್ಶನ ನೀಡುತ್ತಾರೆ ಎಂದರು.

ಗಣತಿ ಸಮಯದಲ್ಲಿ ಮನೆಗೆ ಬೀಗ ಹಾಕಿದ್ದರೆ,

ಅಧಿಕಾರಿಗಳು ಕನಿಷ್ಟ ಮೂರು ಬಾರಿ ಆ ಮನೆಗೆ ಭೇಟಿ ನೀಡಲು ಪ್ರಯತ್ನಿಸುತ್ತಾರೆ. ಈ ಸಂದರ್ಭ ಭರ್ತಿ ಮಾಡಿದ ನಮೂನೆಯನ್ನು ಮತದಾರರು ಕಡ್ಡಾಯವಾಗಿ ಬೂತ್ ಮಟ್ಟದ ಅಧಿಕಾರಿಗಳಿಗೆ ಸಲ್ಲಿಸಬೇಕು. ಅಧಿಕಾರಿಗಳು ಭರ್ತಿ ಮಾಡಿದ ನಮೂನೆ ಮತ್ತು ಅಗತ್ಯ ದಾಖಲೆಗಳನ್ನು ಪಡೆದು, ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಒಂದು ಪ್ರತಿಗೆ ಸ್ವೀಕೃತಿ ನೀಡುತ್ತಾರೆ. ಜೊತೆಗೆ ಮತದಾರರು ದಾಖಲೆಗಳೊಂದಿಗೆ ಭರ್ತಿ ಮಾಡಿದ ನಮೂನೆಯನ್ನು ಆನ್‌ಲೈನ್ ಮೂಲಕವೂ ಅಪ್‌ಲೋಡ್ ಮಾಡಬಹುದು ಎಂದು ತಿಳಿಸಿದರು.

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ ಕಾರ್ಯದ ಹಿನ್ನೆಲೆಯಲ್ಲಿ ಎಲ್ಲಾ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳು ಪ್ರತಿ ಮತಗಟ್ಟೆಗೆ ಒಬ್ಬರಂತೆ ಬೂತ್ ಮಟ್ಟದ ಏಜೆಂಟರನ್ನು ನೇಮಕ ಮಾಡುವುದು ಕಡ್ಡಾಯವಾಗಿದೆ. ಮಾನ್ಯತೆ ಪಡೆದಿರುವ ಎಲ್ಲಾ ರಾಜಕೀಯ ಪಕ್ಷಗಳು ಮತಗಟ್ಟೆ ಹಂತದಲ್ಲಿ ಹೆಚ್ಚಿನ ಮಾಹಿತಿ ನೀಡಲು, ಮತಗಟ್ಟೆ ಅಧಿಕಾರಿಗಳ ಕಾರ್ಯ ಪರಿವೀಕ್ಷಿಸಲು ಹಾಗೂ ನ್ಯೂನತೆ ರಹಿತ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು ಅನುಕೂಲವಾಗುವಂತೆ ತಮ್ಮ ಪಕ್ಷದ ವತಿಯಿಂದ ಬೂತ್ ಮಟ್ಟದ ಏಜೆಂಟರನ್ನು ನೇಮಕ ಮಾಡಿ ಪಟ್ಟಿಯನ್ನು ಸಲ್ಲಿಸುವಂತೆ ಚುನಾವಣಾಧಿಕಾರಿ ಅವರು ಹೇಳಿದರು.

ಮ್ಯಾಪಿಂಗ್‌ನಲ್ಲಿ ಪ್ರಗತಿ

ಪ್ರಸ್ತುತ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯ ಪೂರ್ವಭಾವಿ ಕಾರ್ಯವಾಗಿ ೨೦೨೫ ರ ಮತದಾರರ ಪಟ್ಟಿಯಲ್ಲಿರುವ ಮತದಾರರನ್ನು ೨೦೦೨ ರ ಮತದಾರರ ಪಟ್ಟಿಯೊಂದಿಗೆ ಹೊಂದಾಣಿಕೆ ಮಾಡಿ, ಲಭ್ಯವಿರುವ ಮತದಾರರನ್ನು ಹಾಗೂ ಅವರ ಸಂತತಿ ವಿವರಗಳನ್ನು ಜೋಡಣೆ ಮಾಡಲಾಗಿದೆ. ಈ ಕಾರ್ಯದಲ್ಲಿ ೪,೬೮,೫೪೬ ಮತದಾರರಲ್ಲಿ ೪,೬೦,೬೦೨ ಮತದಾರರನ್ನು ಮ್ಯಾಪಿಂಗ್ ಮಾಡುವ ಮೂಲಕ ಜಿಲ್ಲೆಯು ಶೇ.೯೮.೩೦ ಪ್ರಗತಿ ಸಾಧಿಸಲಾಗಿದ್ದು, ಉಳಿದ ಮತದಾರರನ್ನು ಜೋಡಣೆ ಮಾಡುವ ಕಾರ್ಯವು ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಅಧಿಕಾರಿಗಳ ನೇಮಕ

ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಕ್ಕೆ ಮತದಾರರ ನೋಂದಣಾಧಿಕಾರಿಗಳ ಮತ್ತು ಸಹಾಯಕ ಮತದಾರರ ನೋಂದಣಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ೨೦೮-ಮಡಿಕೇರಿ ಕ್ಷೇತ್ರಕ್ಕೆ ಉಪ ವಿಭಾಗಧಿಕಾರಿ ನಿತಿನ್ ಚಕ್ಕಿ, ೨೦೯-ವಿರಾಜಪೇಟೆ ಕ್ಷೇತ್ರಕ್ಕೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಆರ್.ಮಂಜುನಾಥ್ ಅವರನ್ನು ನೇಮಕ ಮಾಡಲಾಗಿದೆ. ಸಹಾಯಕ ಮತದಾರರ ನೋಂದಣಾಧಿಕಾರಿಗಳಾಗಿ ತಾಲೂಕು ತಹಶೀಲ್ದಾರ್‌ಗಳನ್ನು ನೇಮಕ ಮಾಡಲಾಗಿದೆ. ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಯಲ್ಲಿ ಜಿಲ್ಲೆಯಲ್ಲಿ ೫೫೨ ಬಿಎಲ್‌ಒಗಳು ಹಾಗೂ ೯೬ ಬಿಎಲ್‌ಒ ಮೇಲ್ವಿಚಾರಕರನ್ನು ನೇಮಕ ಮಾಡಿರುವುದಾಗಿ ಮಾಹಿತಿ ನೀಡಿದರು.