ಸಿದ್ದಾಪುರ, ಜೂ. ೬: ಹುಲಿ ದಾಳಿಗೆ ಹಸು ಬಲಿಯಾದ ಘಟನೆ ವೀರಾಜಪೇಟೆ ವಲಯ ಅರಣ್ಯ ವ್ಯಾಪ್ತಿಗೆ ಒಳಪಡುವ ಬೊಳ್ಳ್ ಮಾಡ್ ಗ್ರಾಮದಲ್ಲಿ ನಿನ್ನೆ ಸಂಭವಿಸಿದೆ.

ಬೊಳ್ಳರಿಮಾಡ್ ಗ್ರಾಮದ ನಿವಾಸಿ ಕುಯ್ಯಂಡ ಕಾಳಯ್ಯ ಎಂಬವರಿಗೆ ಸೇರಿದ ಹಸುವನ್ನು ಹುಲಿ ದಾಳಿ ನಡೆಸಿ ಕೊಂದುಹಾಕಿದೆ. ಮತ್ತೊಂದು ಹಸು ಗಂಭೀರ ಗಾಯಗೊಂಡಿದೆ. ಈ ಹಿನ್ನೆಲೆ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕೆ ವೀರಾಜಪೇಟೆ ವಲಯ ಅರಣ್ಯ ಅಧಿಕಾರಿ ಶಿವರಾಂ ಹಾಗೂ ಅರಣ್ಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಗ್ರಾಮ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಕಾರ್ಯಾಚರಣೆ ನಡೆಸಿದರು. -ವಾಸು