ಸೋಮವಾರಪೇಟೆ, ಜೂ.೬: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ವತಿಯಿಂದ ಗೋಣಿಮರೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಹೆಚ್.ಆರ್ ಸುನಿತಾ ವಹಿಸಿದ್ದರು. ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಕಾರ್ಯದರ್ಶಿ ಶ್ಯಾಮಲಾ ಅವರು ಸಸಿಗಳಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಯೋಜನಾಧಿಕಾರಿ ಹನುಮಂತಪ್ಪ, ಕೆರೆ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರೇವಣ್ಣ, ಗಣಗೂರು ಒಕ್ಕೂಟದ ಅಧ್ಯಕ್ಷ ಚೇತನ್, ಗೋಣಿಮರೂರು ಒಕ್ಕೂಟದ ಅಧ್ಯಕ್ಷೆ ಮುತ್ತಮ್ಮ, ಸೇವಾ ಪ್ರತಿನಿಧಿಗಳು ಹಾಗೂ ಶಾಲೆಯ ಶಿಕ್ಷಕರಾದ ಸಂತೋಷ್ ಮತ್ತು ಸುಜಾತ, ವಿದ್ಯಾರ್ಥಿಗಳು ಇದ್ದರು. ೧ ರಿಂದ ೩ನೇ ತರಗತಿಯ ಮಕ್ಕಳಿಗೆ ಗಿಡಗಳ ಎಲೆ ಗುರುತಿಸುವ ಸ್ಪರ್ಧೆಯನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮವನ್ನು ವಲಯ ಮೇಲ್ವಿಚಾರಕ ದೇವೇಂದ್ರ ಪ್ರಸಾದ್ ನಿರ್ವಹಿಸಿದರು.