ಕುಶಾಲನಗರ, ಜೂ. ೬: ಕುಶಾಲನಗರದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಶ್ರೀನಿವಾಸ ಕಲ್ಯಾಣ ಮಹೋತ್ಸವ-೨೦೨೬ಕ್ಕೆ ಶನಿವಾರ ವಿಶೇಷ ಪೂಜಾ ಕಾರ್ಯಕ್ರಮಗಳೊಂದಿಗೆ ಚಾಲನೆ ನೀಡಲಾಯಿತು.

ಕುಶಾಲನಗರ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಸಮಸ್ತ ಭಜನಾ ಮಂಡಳಿಗಳು ಲೋಕ ಕಲ್ಯಾಣಾರ್ಥವಾಗಿ ಆಯೋಜಿಸಿದ ಈ ಕಾರ್ಯಕ್ರಮದ ಸಂಬAಧ ಶನಿವಾರ ಸಂಜೆ ಕುಶಾಲನಗರ ಗಾಯತ್ರಿ ಕಲ್ಯಾಣ ಮಂಟಪ ಸಭಾಂಗಣದಲ್ಲಿ ವರಪೂಜೆ ಮತ್ತು ಇತರ ವಿಧಿ ವಿಧಾನಗಳು ಜರುಗಿ ನಂತರ ಕಲ್ಯಾಣ ಮಂಟಪದಿAದ ಕುಶಾಲನಗರ ಗಣಪತಿ ದೇವಾಲಯ ತನಕ ರಥಬೀದಿ ಮಾರ್ಗವಾಗಿ ರಥೋತ್ಸವ ಮೆರವಣಿಗೆ ನಡೆಯಿತು. ನಂತರ ಅಲ್ಲಿಂದ ಮರಳಿ ಕಲ್ಯಾಣ ಮಂಟಪಕ್ಕೆ ಆಗಮಿಸಿ ಪ್ರಸಾದ ವಿತರಣೆ ನಡೆಯಿತು.

ಸಮಿತಿಯ ಅಧ್ಯಕ್ಷರಾದ ಎಸ್ ಕೆ ಸತೀಶ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರಿನ ವೇದಬ್ರಹ್ಮ ಗೋವಿಂದಾಚಾರ್ಯ ಆದ್ಯ ಅವರ ತಂಡದ ಮೂಲಕ ಪೂಜಾ ಕಾರ್ಯಕ್ರಮಗಳು ಜರುಗಿದವು. ಮಹಿಳಾ ಭಜನಾ ಮಂಡಳಿ ಸದಸ್ಯರಿಂದ ಮೆರವಣಿಗೆಯಲ್ಲಿ ಆಕರ್ಷಕ ಕೋಲಾಟ ನಡೆಯಿತು.

ಈ ಸಂದರ್ಭ ಸಮಿತಿಯ ಸದಸ್ಯರು ಕುಶಾಲನಗರ ದೇವಾಲಯ ಒಕ್ಕೂಟದ ಪ್ರತಿನಿಧಿಗಳು, ಮಹಿಳಾ ಭಜನಾ ಮಂಡಳಿ ಸದಸ್ಯರು, ಭಕ್ತಾದಿಗಳು ಪಾಲ್ಗೊಂಡಿದ್ದರು.

ಶ್ರೀನಿವಾಸ ಕಲ್ಯಾಣೋತ್ಸವ ಅಂಗವಾಗಿ ಭಾನುವಾರ ಬೆಳಗ್ಗೆ ೭:೩೦ ರಿಂದ ಪಂಚಾಮೃತ ಅಭಿಷೇಕ ನಂತರ ಪೂಜಾ ಕಾರ್ಯಕ್ರಮಗಳು ನಡೆಯಲಿದೆ ಮಧ್ಯಾಹ್ನ ಪ್ರಸಾದ ವಿತರಣೆ ನಂತರ ಉಯ್ಯಾಲೋತ್ಸವ ಜರುಗಲಿದೆ ಎಂದು ಅಧ್ಯಕ್ಷರಾದ ಎಸ್ ಕೆ ಸತೀಶ್ ತಿಳಿಸಿದ್ದಾರೆ