ಕೂಡಿಗೆ, ಜೂ. ೭: ಕುಶಾಲನಗರ ವಲಯ ಅತ್ತೂರು ಶಾಖೆ ವ್ಯಾಪ್ತಿಯ ಅಂದಗೋವೆ ಗ್ರಾಮದ ತೋಟದಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ನಡೆಯಿತು.

ಕ್ಷಿಪ್ರ ಕಾರ್ಯಾಚರಣೆಯ ತಂಡ, ಕುಶಾಲನಗರ ವಲಯ ಅರಣ್ಯಾಧಿಕಾರಿ ಆರ್. ರಕ್ಷಿತ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿತು. ಈ ಸಂದರ್ಭ ಅತ್ತೂರು ಉಪವಲಯ ಅರಣ್ಯಾಧಿಕಾರಿ ಉಮೇಶ್ ಸೇರಿದಂತೆ ಸಿಬ್ಬಂದಿ ಇದ್ದರು.