ಕುಶಾಲನಗರ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕುಶಾಲನಗರದ ಕ್ರೆöÊಸ್ಟ್ ವಿದ್ಯಾಸಂಸ್ಥೆ ಆಶ್ರಯದಲ್ಲಿ ಮಕ್ಕಳಿಂದ ಸೈಕಲ್ ಮೂಲಕ ಜಾಗೃತಿ ಜಾಥಾ ನಡೆಯಿತು.

ಕುಶಾಲನಗರ ಕೋಣಮಾರಿಯಮ್ಮ ದೇವಾಲಯ ಬಳಿಯಿಂದ ಮಕ್ಕಳು ಸೈಕಲ್ ಮೂಲಕ ಜಾಥಾ ನಡೆಸಿ ಬಿತ್ತಿಫಲಕ ಪ್ರದರ್ಶಿಸಿ ಜನರಲ್ಲಿ ಪರಿಸರ ಬಗ್ಗೆ ಅರಿವು ಜಾಗೃತಿ ಮೂಡಿಸುವ ಪ್ರಯತ್ನ ನಡೆಸಿದರು.

ಕಾವೇರಿ ನದಿ ಸ್ವಚ್ಛತಾ ಆಂದೋಲನ ರಾಜ್ಯ ಸಂಚಾಲಕÀ ಚಂದ್ರಮೋಹನ್ ಜಾಥಾಕ್ಕೆ ಚಾಲನೆ ನೀಡಿ ಶುಭ ಕೋರಿದರು.

ಕುಶಾಲನಗರದ ಮುಖ್ಯ ರಸ್ತೆಗಳಲ್ಲಿ ತೆರಳಿದ ಸೈಕಲ್ ಜಾಥಾ ಪಟ್ಟಣದ ಗಣಪತಿ ದೇವಾಲಯ ತನಕ ತೆರಳಿ ನಂತರ ಕಾರು ನಿಲ್ದಾಣದಲ್ಲಿ ಮುಕ್ತಾಯಗೊಂಡಿತು. ಪುಟಾಣಿಗಳು ಸೈಕಲ್‌ನಲ್ಲಿ ತೆರಳಿ ಪರಿಸರ ಜಾಗೃತಿ ಮೂಡಿಸಿದರು.

ಕಾರು ನಿಲ್ದಾಣ ಆವರಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ವಿಶ್ವಮಟ್ಟದ ಮಿಕ್ಸ್÷್ಡ ಮಾರ್ಷಲ್ ಆರ್ಟ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ವಿಜೇತ ಬಾಲಕಿ ಆಜ್ಞಾ ಅಮಿತ್ ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದಳು.

ಎಂ.ಎನ್. ಚಂದ್ರಮೋಹನ್ ಮಾತನಾಡಿ, ಮಕ್ಕಳಲ್ಲಿ ಪರಿಸರ ಪ್ರೇಮ ಭಾವನೆ ಸೃಷ್ಟಿಯಾಗಬೇಕು. ಪ್ರತಿ ಮಕ್ಕಳು ತಮ್ಮ ಹುಟ್ಟುಹಬ್ಬಕ್ಕೆ ಗಿಡವೊಂದನ್ನು ನೆಟ್ಟು ಅದನ್ನು ಪೋಷಿಸಿ ಬೆಳೆಸುವಂತ ಕೆಲಸ ಆಗಬೇಕು ಎಂದು ಸಲಹೆ ನೀಡಿದರು.

ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಸತೀಶ್ ಕುಂದರ್ ಮಾತನಾಡಿ, ಮಕ್ಕಳು ಶಿಕ್ಷಣದೊಂದಿಗೆ ಪರಿಸರ ಪ್ರಕೃತಿ ಬಗ್ಗೆ ಜ್ಞಾನ ಹೊಂದಬೇಕು ಎಂದರು.

ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷೆ ಸಂಧ್ಯಾ ಗಣೇಶ್ ಮಾತನಾಡಿದರು. ಸಂಸ್ಥೆಯ ೫೦ಕ್ಕೂ ಅಧಿಕ ಮಕ್ಕಳು ಜಾಗೃತಿ ಜಾಥಾದಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭ ಕುಶಾಲನಗರ ಕಾರು ಮಾಲೀಕರು ಚಾಲಕರ ಸಂಘದ ಅಧ್ಯಕ್ಷ ಉದಯ್, ನಿವೃತ್ತ ಅರಣ್ಯ ಅಧಿಕಾರಿ ಮೋಹನ್ ರಾಜ್, ಅರವಿಂದ ಬಾಬು, ಶರಣ್, ಕರ್ನಾಟಕ ರಕ್ಷಣಾ ವೇದಿಕೆ ಮಡಿಕೇರಿ ಕ್ಷೇತ್ರ ಪ್ರಮುಖರಾದ ಆನಂದ್, ನಗರಾಧ್ಯಕ್ಷ ಡಿ.ಆರ್. ಯೋಗೇಶ್ ಸಂಸ್ಥೆಯ ಪ್ರಾಂಶುಪಾಲ ದೋರ್ತಿ ವಾಸ್, ಸಂಸ್ಥೆಯ ಶಿಕ್ಷಕಿಯರು, ಸಂಘ ಸಂಸ್ಥೆಗಳ ಪ್ರಮುಖರು ಇದ್ದರು.