ಐಗೂರು, ಜೂ. ೮: ಕಾಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೨೦೨೬-೨೭ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಸಂಭ್ರಮದಿAದ ನಡೆಯಿತು.
ಬೇಸಿಗೆ ರಜೆ ಮುಗಿಸಿ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಎಸ್.ಡಿ.ಎಂ.ಸಿ. ಸದಸ್ಯರು, ಶಿಕ್ಷಕ ವೃಂದ ದವರು ಹೂಗುಚ್ಛ ನೀಡಿ ಸ್ವಾಗತಿಸಿ ಬರಮಾಡಿ ಕೊಂಡರು. ಶಾಲೆಯಲ್ಲಿ ಆರಂಭ ಗೊಂಡಿರುವ ಆಂಗ್ಲ ಮಾಧ್ಯಮ ತರಗತಿಗಳಿಗೆ ತಮ್ಮ ಮಕ್ಕಳನ್ನು ದಾಖಲಿ ಸಲು ಹಲವು ಪೋಷಕರು ಶಾಲೆಗೆ ಆಗಮಿಸಿದ್ದರು. ಪೋಷಕರು ಮತ್ತು ಶಿಕ್ಷಕರ ಸಭೆ ನಡೆದು ಹೊಸ ಶೈಕ್ಷಣಿಕ ವರ್ಷದ ಯೋಜನೆ, ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳ ಪ್ರಗತಿಯ ಬಗ್ಗೆ ಚರ್ಚಿಸಲಾಯಿತು. ಕಾರ್ಯಕ್ರಮದ ಕೊನೆಗೆ ಎಲ್ಲರಿಗೂ ಸಿಹಿ ಹಂಚಿ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.