ಪೊನ್ನಂಪೇಟೆ, ಜೂ. ೮: ಕೊಡಗು ಬಾಕ್ಸಿಂಗ್ ಅಸೋಸಿಯೇಷನ್ ವತಿಯಿಂದ ಗೋಣಿಕೊಪ್ಪಲಿನ ಪ್ರೌಢಶಾಲೆಯಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ೧೪ ವರ್ಷದೊಳಗಿನವರ ಬಾಕ್ಸಿಂಗ್ ಚಾಂಪಿಯನ್ ಶಿಪ್‌ಗೆ ಕರ್ನಲ್ ಚೆಪ್ಪುಡಿರ ಮುತ್ತಣ್ಣ ಹಾಗೂ ಕಾಟಿಮಾಡ ಜಿಮ್ಮಿ ಅಣ್ಣಯ್ಯ ಚಾಲನೆ ನೀಡಿದರು. ನಂತರ ಮಾತನಾಡಿದ ಕರ್ನಲ್ ಚೆಪ್ಪುಡಿರ ಮುತ್ತಣ್ಣ, ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಪ್ರತಿಯೊಬ್ಬರೂ ಕ್ರೀಡಾ ಸ್ಫೂರ್ತಿಯಿಂದ ಸ್ಪರ್ಧೆಯಲ್ಲಿ ಪಾಲ್ಗೊಳ್ಳಬೇಕು ಎಂದರು.

ರಾಜ್ಯದಿAದ ಒಟ್ಟು ೮ ಅಧಿಕಾರಿಗಳು, ೬೦ ಬಾಲಕರು ಹಾಗೂ ೨೫ ಬಾಲಕಿಯರು ಚಾಂಪಿಯನ್ ಶಿಪ್‌ನಲ್ಲಿ ಭಾಗವಹಿಸಿದ್ದು, ಮೊದಲ ದಿನ ಕೊಡಗಿನ ಬಾಕ್ಸರ್‌ಗಳು ಉತ್ತಮ ಆರಂಭ ಪಡೆದಿದ್ದಾರೆ. ಕಾರ್ಯಕ್ರಮದಲ್ಲಿ ರಾಜ್ಯ ಬಾಕ್ಸಿಂಗ್ ಸಂಸ್ಥೆಯ ಕಾರ್ಯದರ್ಶಿ ಸಾಯಿ ಸತೀಶ್, ಕ್ಯಾಪ್ಟನ್ ಧನಂಜಯ್, ಚಂದ್ರಶೇಖರ್, ಜೇಶ್ವಂತ್, ಚಂದ್ರಕುಮಾರ್, ಕೊಡಗು ತಂಡದ ತರಬೇತುದಾರರಾದ ಮಾದಪ್ಪ, ಶರತ್ ನಾಯ್ಡು ಹಾಗೂ ಇನ್ನಿತರರು ಉಪಸ್ಥಿತರಿದ್ದರು.