ಮಡಿಕೇರಿ, ಜೂ. ೯: ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆ ೮.೩೦ಕ್ಕೆ ಕೊನೆಗೊಂಡAತೆ ಕಳೆದ ೨೪ ಗಂಟೆ ಅವಧಿಯಲ್ಲಿ ಸರಾಸರಿ ೧೯.೫೨ ಮಿ.ಮೀ ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ ೨೨೩.೬೨ ಮಿ.ಮೀ ಮಳೆ ಆಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ ೭೮೫.೬೦ ಮಿ.ಮೀ ಮಳೆಯಾಗಿತ್ತು. ಇದುವರೆಗೆ ಈ ವರ್ಷದಲ್ಲಿ ಕಳೆದ ಸಾಲಿಗಿಂತ ೫೬೨ ಮಿ.ಮೀ (೨೨ ಇಂಚಿನಷ್ಟು) ಕಡಿಮೆ ಮಳೆ ಸುರಿದಿದೆ.
ಮಡಿಕೇರಿ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ ೨೬.೫೩ ಮಿ.ಮೀ. ಈ ವರ್ಷದಲ್ಲಿ ಇಲ್ಲಿಯವರೆಗಿನ ಮಳೆ ೩೦೩.೯೩ ಮಿ.ಮೀ ಆಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ ೧,೧೫೮.೦೬ ಮಿ.ಮೀ. ಮಳೆಯಾಗಿತ್ತು.
ವೀರಾಜಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ ೨೫.೭೦ ಮಿ.ಮೀ ಮಳೆಯಾಗಿದ್ದು, ಜನವರಿಯಿಂದ ಇಲ್ಲಿಯವರೆಗಿನ ೨೮೭.೧೭ ಮಿ.ಮೀ ಸುರಿದಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ೮೧೯.೭೫ ಮಿ.ಮೀ ಮಳೆಯಾಗಿತ್ತು.
ಪೊನ್ನಂಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ ೨೩.೨೭ ಮಿ.ಮೀ ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ ೧೭೮.೫೪ ಮಿ.ಮೀ ಆಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ ೭೨೪.೪೦ ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ ೧೪.೯೦ ಜನವರಿಯಿಂದ ಇಲ್ಲಿಯವರೆಗೆ ೨೦೪.೪೭ ಮಿ.ಮೀ ಮಳೆಯಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ ೬೭೯.೧೪ ಮಿ.ಮೀ. ಮಳೆಯಾಗಿತ್ತು. ಕುಶಾಲನಗರ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ ೭.೨೦ ಮಿ.ಮೀ. ಜನವರಿಯಿಂದ ಇಲ್ಲಿಯವರೆಗೆ ೧೪೩.೮೫ ಮಿ.ಮೀ ಮಳೆಯಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ ೫೪೬.೬೪ ಮಿ.ಮೀ. ಮಳೆಯಾಗಿತ್ತು.