ಗೋಣಿಕೊಪ್ಪ, ಜೂ. ೯: ಗೋಣಿಕೊಪ್ಪ ಪಟ್ಟಣದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ರಸ್ತೆಯಲ್ಲಿರುವ ಟಾಸ್ ಕಟ್ಟಡದಲ್ಲಿ ಭಾರತೀಯ ಜನತಾ ಪಾರ್ಟಿ ವೀರಾಜಪೇಟೆ ಮಂಡಲ ಕಚೇರಿಯನ್ನು ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಲೋಕಾರ್ಪಣೆಗೊಳಿಸಿದರು.
ಈ ಸಂದರ್ಭ ಮಾತನಾಡಿದ ಸಂಸದರು ಪಕ್ಷದ ಕಚೇರಿ ಉದ್ಘಾಟನೆಯೊಂದಿಗೆ ಪಕ್ಷದ ಬೆಳವಣಿಗೆ ಹೆಚ್ಚಾಗಬೇಕು. ಕೊಡಗು ಜಿಲ್ಲೆಯಲ್ಲಿ ಪಕ್ಷ ಬಲವರ್ಧನೆ ದೃಷ್ಟಿಯಿಂದ ಹೆಚ್ಚು ಕಾರ್ಯಾಲಯಗಳ ಅವಶ್ಯಕತೆಯಿದೆ. ಮುಂಬರುವ ಚುನಾವಣೆಗಳನ್ನು ಎದುರಿಸಲು ಹಾಗೂ ಕಾರ್ಯತಂತ್ರಗಳನ್ನು ರೂಪಿಸಲು ಕಾರ್ಯಾಲಯಗಳು ಶಕ್ತಿ ತುಂಬಲಿವೆ ಎಂದು ಹೇಳಿದರು.
ಪರಿಸರ ದಿನಾಚರಣೆ
ಕೊಡಗು ಜಿಲ್ಲೆಯಲ್ಲಿ ಹಸಿರು ಹೊದಿಕೆ ಹೆಚ್ಚಿದ್ದರೂ ಸಹ ಪ್ರಾಕೃತಿಕ ವಿಕೋಪಗಳು ಸಂಭವಿಸಿವೆ ಹಾಗೂ ವನ್ಯಜೀವಿ ಮಾನವ ಸಂಘರ್ಷ ಹೆಚ್ಚಿದೆ. ಪ್ರಕೃತಿ, ವನ್ಯಜೀವಿಗಳ ಮೇಲೆ ಕಾಳಜಿಯೊಂದಿಗೆ ಜನರಿಗೆ ನೆಮ್ಮದಿಯಿಂದ ಬದುಕುವ ಅವಕಾಶ ಕೂಡ ಆಗಬೇಕು ಎಂದು ಸಂಸದ ಯದುವೀರ್ ಒಡೆಯರ್ ಅಭಿಪ್ರಾಯಪಟ್ಟರು.
ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಡೆದ ಒಂದು ಗಿಡ ತಾಯಿಯ ಹೆಸರಿನಲ್ಲಿ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ವನ್ಯಜೀವಿ ಮಾನವ ಸಂರ್ಘಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಿದೆ. ಎಲ್ಲಾ ಜಿಲ್ಲೆಗಳಲ್ಲಿ ಪ್ರಕೃತಿಗೆ ಸಂಬAಧಿಸಿದ ಸಮಸ್ಯೆಗಳು ಇವೆ.ಇದಕ್ಕೆ ಪೂರಕವಾಗಿ ಹಸಿರು ಹೊದಿಕೆ ಹೆಚ್ಚಿಸುವ ಕಾರ್ಯಕ್ರಮಗಳನ್ನು ಹೆಚ್ಚು ಮಾಡಬೇಕಿದೆ. ಪರಿಸರ ಕಾಳಜಿಯಿಂದ ಕೈಗೊಳ್ಳುವ ಕಾರ್ಯಕ್ರಮಗಳಿಗೆ ಸಮಾಜದಲ್ಲಿ ಸಕಾರಾತ್ಮಕವಾದ ಪ್ರತಿಕ್ರಿಯೆಗಳು ಸಿಗಲಿದೆ ಎಂದು ಹೇಳಿದರು.
ಎಂಎಲ್ಸಿ ಮಂಡೇಪAಡ ಸುಜಾಕುಶಾಲಪ್ಪ ಮಾತನಾಡಿ ಹಸಿರೆಲೆ ಗೊಬ್ಬರಗಳ ಬಳಕೆ ಕಡೆಗೆ ಹೆಚ್ಚು ಗಮನ ಹರಿಸಬೇಕು. ಹಿರಿಯರು ಕಿರಿಯರಿಗೆ ತಮ್ಮ ತೋಟಗಳಲ್ಲಿ ಕೃಷಿಯ ಜವಾಬ್ದಾರಿಯನ್ನು ಅರಿವಿಕೆಗೆ ತರುವ ಮೂಲಕ ಕೃಷಿಯಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆ ನೀಡಬೇಕು ಎಂದು ಹೇಳಿದರು.
ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಆವರಣದಲ್ಲಿ ಕೇಂದ್ರ ಸರ್ಕಾರ ಕಾರ್ಯಕ್ರಮವಾದ ಕೃಷಿ ಭೂಮಿ ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಉಳಿಸಿ ಅಭಿಯಾನದ ಅಂಗವಾಗಿ ಸಂಸದ ಯದುವೀರ್ ಒಡೆಯರ್ ಸಸಿ ನೆಡುವ ಮೂಲಕ ಜಾಗೃತಿ ಮೂಡಿಸಿದರು.
ಈ ಸಂದರ್ಭ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ವೀರಾಜಪೇಟೆ ಮಂಡಲ ಅಧ್ಯಕ್ಷ ಮಾಚಿಮಂಡ ಸುವಿನ್ ಗಣಪತಿ, ಮಾಜಿ ಶಾಸಕ ಕೆ.ಜಿ ಬೋಪಯ್ಯ, ಮಂಡಲ ಕಾರ್ಯದರ್ಶಿ ಕುಟ್ಟಂಡ ಅಜಿತ್ ಕರುಂಬಯ್ಯ, ಜಿಲ್ಲಾ ಉಪಾಧ್ಯಕ್ಷರುಗಳಾದ ಅರುಣ್ ಭೀಮಯ್ಯ ಹಾಗೂ ಗುಮ್ಮಟ್ಟಿರ ಕಿಲನ್, ಜಿಲ್ಲಾ ಪ್ರ.ಕಾರ್ಯದರ್ಶಿ ನೆಲ್ಲಿರ ಚಲನ್ ಕುಮಾರ್ ಕೆವಿಕೆ ಮುಖ್ಯಸ್ಥ ಮುರಳಿದರ್ ಇದ್ದರು.