ಮಡಿಕೇರಿ, ಜೂ. ೯: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಮೇ ಮತ್ತು ಜೂನ್ ತಿಂಗಳ ಹಂಚಿಕೆಯನ್ನು ಜೂನ್ನಲ್ಲಿಯೇ ವಿತರಣೆ ಮಾಡಲು ಆದೇಶಿಸಲಾಗಿದೆ. ಸರ್ಕಾರದ ಮಾರ್ಗಸೂಚಿಯಂತೆ ಏಕ-ಸದಸ್ಯ, ದ್ವಿ-ಸದಸ್ಯ ಮತ್ತು ತ್ರಿ-ಸದಸ್ಯ ಫಲಾನುಭವಿಗಳಿರುವ ಅಂತ್ಯೋದಯ (ಎಎವೈ) ಪಡಿತರ ಚೀಟಿಗಳಿಗೆ ಸಂಬAಧಪಟ್ಟAತೆ ಮೇ-೨೦೨೬ರ ಮಾಹೆಯಲ್ಲಿಯೇ ಮೇ ಮತ್ತು ಜೂನ್ ೨೦೨೬ ಮಾಹೆಗಳ ನಿಗದಿಪಡಿಸಿದ ಪಡಿತರವು ಪೂರ್ಣ ಪ್ರಮಾಣದಲ್ಲಿ ವಿತರಣೆಯಾಗಿರುವುದರಿಂದ ಅಂತಹ ಪಡಿತರ ಚೀಟಿಗಳಿಗೆ ಜೂನ್-೨೦೨೬ರ ಮಾಹೆಯಲ್ಲಿ ಅನ್ನಬಾಗ್ಯ ಅಕ್ಕಿ ಹಂಚಿಕೆ ಇರುವುದಿಲ್ಲ.
ನಾಲ್ಕು ಮತ್ತು ನಾಲ್ಕಕ್ಕಿಂತ ಹೆಚ್ಚಿನ ಸದಸ್ಯರುಳ್ಳ ಅಂತ್ಯೋದಯ(ಎಎವೈ) ಪಡಿತರ ಚೀಟಿಯ ಪ್ರತಿ ಫಲಾನುಭವಿಗೆ ಮತ್ತು ಪಿಹೆಚ್ಹೆಚ್(ಬಿಪಿಎಲ್) ಪಡಿತರ ಚೀಟಿಯ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳಿಗೆ ೦೫ ಕೆ.ಜಿ ಅಕ್ಕಿಯನ್ನು ಹಂಚಿಕೆ ಮಾಡಲಾಗಿರುತ್ತದೆ. ಈ ಯೋಜನೆಯಡಿ ವಿತರಿಸಲಾದ ಆಹಾರ ಧಾನ್ಯವನ್ನು ಹಣಕ್ಕಾಗಿ ಪಡಿತರ ಚೀಟಿದಾರರು ಮಾರಾಟ ಮಾಡುವುದಾಗಲಿ ಅಥವಾ ಸಂಗ್ರಹಣೆ ಮಾಡುವುದು ಕಂಡು ಬಂದಲ್ಲಿ ಅಂತಹ ಪಡಿತರ ಚೀಟಿದಾರರಿಗೆ ಆಧಾರದಲ್ಲಿ ದಂಡ ವಿಧಿಸಲಾಗುವುದು ಮತ್ತು ಈ ಪಡಿತರ ಚೀಟಿಯನ್ನು ಆರು ತಿಂಗಳ ಅವಧಿಗೆ ಅಮಾನತ್ತುಗೊಳಿಸಲಾವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ಭೀಮರಾಯ ಅವರು ತಿಳಿಸಿದ್ದಾರೆ.