ಸಿದ್ದಾಪುರ, ಜೂ. ೯: ಹಾಡಹಗಲೇ ನೆಲ್ಲಿಹುದಿಕೇರಿ ಗ್ರಾಮದ ಸರ್ಕಾರಿ ಶಾಲೆಯ ಸಮೀಪದ ಕಾಫಿ ತೋಟದಲ್ಲಿ ಒಂಟಿ ಸಲಗ ಸುತ್ತಾಡುತ್ತಾ ಆತಂಕ ಸೃಷ್ಟಿಸಿತು.

ಸಂಜೆ ಶಾಲೆ ಬಿಡುವ ಸಮಯವಾಗಿದ್ದ ಕಾರಣ ಸ್ಥಳೀಯರು ಈ ಬಗ್ಗೆ ಎಚ್ಚರಿಕೆ ವಹಿಸುವಂತೆ ಮೊಬೈಲ್ ಸಂದೇಶವನ್ನು ಕಳುಹಿಸಿದರು. ಬಳಿಕ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಎಂ.ಹೆಚ್. ಅಪ್ಸಲ್ ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ಕಾಫಿ ತೋಟದೊಳಗೆ ಕಾರ್ಯಾಚರಣೆ ನಡೆಸಿದರು. ಈ ಸಲಗವನ್ನು ಸೆರೆ ಹಿಡಿದು ಸ್ಥಳಾಂತರ ಮಾಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.