ಮಡಿಕೇರಿ, ಜೂ.೯: ನಗರದ ಜಿಲ್ಲಾ ಸಹಕಾರ ತರಬೇತಿ ಸಂಸ್ಥೆಯ ವಸತಿ ನಿಲಯದಲ್ಲಿ ವ್ಯಾಸ್ತವ್ಯ ಹೂಡಿರುವ ರಾಷ್ಟಿçÃಯ ವಿಪತ್ತು ನಿರ್ವಹಣಾ ತಂಡದ(ಎನ್‌ಡಿಆರ್‌ಎಫ್) ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ ಮಾಡಿ ಮಾಹಿತಿ ಪಡೆದರು. ಜಿಲ್ಲೆಯ ಸೂಕ್ಷö್ಮ ಹಾಗೂ ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಿಸಿ, ತುರ್ತು ಸಂದರ್ಭದಲ್ಲಿ ಜನ-ಜಾನುವಾರು ರಕ್ಷಣೆ ಮಾಡುವಲ್ಲಿ ಎನ್‌ಡಿಆರ್‌ಎಫ್ ತಂಡ ಕರ್ತವ್ಯ ನಿರ್ವಹಿಸಲಿದೆ. ಬೆಂಗಳೂರಿನ ರೀಜನಲ್ ರೆಸ್ಪಾನ್ಸ್ ಸೆಂಟರ್(ಆರ್‌ಆರ್‌ಸಿ) ೧೦ನೇ ಬೆಟಾಲಿಯನ್‌ನ ಇನ್ಸ್ಪೆಕ್ಟರ್ ರಾಮ್ ಭಜ್ ಅವರ ನೇತೃತ್ವದಲ್ಲಿ ಎನ್‌ಡಿಆರ್‌ಎಫ್ ತಂಡ ಆಗಮಿಸಿದ್ದು, ಬೋಟ್‌ಗಳು, ಮರ ಕತ್ತರಿಸುವ ಯಂತ್ರ, ರ‍್ಯಾಪ್ಟ್, ಹಗ್ಗ, ಟೆಂಟ್, ಜೀವರಕ್ಷಕ ಜಾಕೆಟ್, ಸರ್ಚ್ ಲೈಟ್, ಆಕ್ಸಿಜನ್ ಜನರೇಟರ್, ಜೀವರಕ್ಷಕ ಔಷಧಗಳ ಸಿಗ್ನಲ್ ಯೂನಿಟ್‌ಗಳು ಹೀಗೆ ಹಲವು ಪರಿಕರಗಳನ್ನು ಎನ್‌ಡಿಆರ್‌ಎಫ್ ತಂಡ ಒಳಗೊಂಡಿದೆ.

ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸಹಕಾರ ತರಬೇತಿ ಸಂಸ್ಥೆಯ ವಸತಿ ನಿಲಯದಲ್ಲಿ ಎನ್‌ಡಿಆರ್‌ಎಫ್ ತಂಡ ವಾಸ್ತವ್ಯ ಹೂಡಿದ್ದು, ಹೆಚ್ಚಿನ ಮಳೆಯಿಂದ ಅವಘಡಗಳು ಸಂಭವಿಸಿದಲ್ಲಿ ಎನ್‌ಡಿಆರ್‌ಎಫ್ ತಂಡ ತುರ್ತಾಗಿ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಿದೆ ಎಂದರು. ಸೂಕ್ಷö್ಮ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಲಿದೆ; ಹಾಗೆಯೇ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಮಳೆಗಾಲದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅರಿವು ಮೂಡಿಸಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.