ಸೋಮವಾರಪೇಟೆ, ಜೂ. ೯: ತಾಲೂಕು ಅಭಿವೃದ್ಧಿ ಹೋರಾಟ ಸಮಿತಿಯಿಂದ ತಾ. ೧೫ರಂದು ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ಶಾಸಕ ಡಾ. ಮಂತರ್ ಗೌಡ ಅವರ ಉಪಸ್ಥಿತಿಯಲ್ಲಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಇಲಾಖಾಧಿಕಾರಿಗಳನ್ನು ಒಳಗೊಂಡAತೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಡಿ.ಕೆ. ಅರುಣ್ ಕುಮಾರ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾ. ೧೫ರಂದು ಬೆಳಿಗ್ಗೆ ೧೦.೩೦ಕ್ಕೆ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯುವ ಸಂವಾದ ಕಾರ್ಯಕ್ರಮವನ್ನು ಶಾಸಕ ಡಾ. ಮಂತರ್ ಗೌಡ ಅವರು ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ. ಸಿಇಓ, ಡಿಎಫ್ಓ, ತಹಶೀಲ್ದಾರ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳು ಭಾಗಿಯಾಗಲಿದ್ದಾರೆ ಎಂದರು.
ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ ರೈತರು, ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಂವಾದ ನಡೆಯಲಿದೆ. ಇದರೊಂದಿಗೆ ಅಭಿವೃದ್ಧಿ ಕಾರ್ಯಗಳ ಬಗ್ಗೆಯೂ ಚರ್ಚೆಯಾಗಲಿದೆ ಎಂದು ಅರುಣ್ಕುಮಾರ್ ತಿಳಿಸಿದರು.
ಮಾದಾಪುರವನ್ನು ಹೋಬಳಿ ಕೇಂದ್ರವನ್ನಾಗಿಸುವ ಪ್ರಸ್ತಾಪ, ಸೋಮವಾರಪೇಟೆ ಯೋಜನಾ ಪ್ರಾಧಿಕಾರ, ಸ್ವಚ್ಚತೆ, ಶಿಕ್ಷಣ ಕ್ಷೇತ್ರದ ಬೆಳವಣಿಗೆ, ಆರ್ಟಿಓ ಇಲಾಖಾ ಸಮಸ್ಯೆಗಳು, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಲೋಕೋಪಯೋಗಿ ಹಾಗೂ ಜಿ.ಪಂ. ರಸ್ತೆಗಳ ಅಭಿವೃದ್ಧಿ, ರಾಜ್ಯ ಹೆದ್ದಾರಿಗಳ ಪ್ರಸ್ತಾಪ, ಕೃಷಿ ಹಾಗೂ ತೋಟಗಾರಿಕೆ, ಪಶುವೈದ್ಯಕೀಯ, ಪೊಲೀಸ್, ಆಸ್ಪತ್ರೆ, ಸೆಸ್ಕಾಂ, ಪ್ರವಾಸೋದ್ಯಮ, ಕಂದಾಯ, ಅರಣ್ಯ ಇಲಾಖೆಗೆ ಸಂಬAಧಿಸಿದAತೆ ಅಧಿಕಾರಿಗಳೊಂದಿಗೆ ಸಂವಾದ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಸಂವಾದ ಕಾರ್ಯಕ್ರಮದಲ್ಲಿ ಅಧಿಕಾರಿಗಳು, ಸಾಮಾಜಿಕ ಸಂಘಟನೆಗಳು, ಜನಸಾಮಾನ್ಯರು ಭಾಗವಹಿಸಲಿದ್ದಾರೆ. ಜನಸಾಮಾನ್ಯರು ತಮ್ಮ ಅಹವಾಲುಗಳನ್ನು ಸಲ್ಲಿಸಲು ಸೋಮವಾರಪೇಟೆ ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ವೇದಿಕೆ ಸೃಷ್ಟಿಸಿದೆ ಎಂದ ಅವರು, ಕಾರ್ಯಕ್ರಮದಲ್ಲಿ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಉತ್ತಮ ಸೇವೆ ಸಲ್ಲಿಸಿದ ವ್ಯಕ್ತಿಗಳನ್ನು ಗುರುತಿಸಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಸಮಿತಿಯ ಉಪಾಧ್ಯಕ್ಷ ಕೆ.ಎನ್. ದೀಪಕ್, ಪ್ರಧಾನ ಕಾರ್ಯದರ್ಶಿ ಆದರ್ಶ್ ತಮ್ಮಯ್ಯ, ಸಲಹೆಗಾರ ಜಿ.ಎಂ. ಹೂವಯ್ಯ, ಕಾನೂನು ಸಲಹೆಗಾರ ಕೆ.ಡಿ. ಜೀವನ್ಕುಮಾರ್ ಅವರುಗಳು ಉಪಸ್ಥಿತರಿದ್ದರು.