ಮಡಿಕೇರಿ, ಜೂ. ೯: ಮುಂಬರುವ ದಿನಗಳಲ್ಲಿ ರಸಗೊಬ್ಬರಕ್ಕೆ ಸಂಬAಧಿಸಿದAತೆ ಉಂಟಾಗಬಹುದಾದ ವ್ಯತ್ಯಯಗಳು ಹಾಗೂ ಸವಾಲಿನ ಸಂದರ್ಭಗಳನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ರೈತರಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಕೃಷಿ ಇಲಾಖೆ ಮೂಲಕ ಆಯೋಜಿಸಲಾಗುತ್ತಿದೆ.

ಪ್ರಸ್ತುತ ಮದ್ಯಪ್ರಾಚ್ಯದಲ್ಲಿನ ಸಂಘರ್ಷದಿAದಾಗಿ ರಸಗೊಬ್ಬರಗಳ ಉತ್ಪಾದನೆಗೆ ಬಳಸಲಾಗುವ ಕಚ್ಚಾವಸ್ತುಗಳು ಮತ್ತು ರಸಗೊಬ್ಬರಗಳ ಆಮದಿನ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದೆ. ಇದರಿಂದಾಗಿ ೨೦೨೬ನೇ ಮುಂಗಾರು ಹಂಗಾಮಿನಲ್ಲಿ ಯೂರಿಯಾ ಹಾಗೂ ಡಿಎಪಿ ಗೊಬ್ಬರಕ್ಕೆ ಸಮಸ್ಯೆ ಎದುರಾಗುತ್ತಿದೆ.

ಇದರಿಂದಾಗಿ ಯೂರಿಯಾ ಹಾಗೂ ಡಿಎಪಿ ರಸಗೊಬ್ಬರಗಳ ದುರ್ಬಳಕೆ ಹಾಗೂ ಕಾಳಸಂತೆಯಲ್ಲಿ ಮಾರಾಟವನ್ನು ತಡೆಗಟ್ಟಲು ಕೆ. ಕಿಸಾನ್ ತಂತ್ರಾAಶದ ಮೂಲಕವೇ ರೈತರಿಗೆ ಕಡ್ಡಾಯವಾಗಿ ವಿತರಣೆ ಮಾಡುವ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಚಂದ್ರಶೇಖರ್ ಅವರು ತಿಳಿಸಿದ್ದಾರೆ.

ಸದರಿ ತಂತ್ರಾAಶದಲ್ಲಿ ರೈತರ ಈIಆ ಸಂಖ್ಯೆಯನ್ನು ಬಳಸಿಕೊಂಡು ಕೃಷಿ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ೧ ತಿಂಗಳಿಗೆ ಯೂರಿಯಾ ಎಕರೆಗೆ ಒಂದು ಚೀಲ, ಡಿ.ಎ.ಪಿ ಎಕರೆಗೆ ಒಂದು ಚೀಲ ಹಾಗೂ ಅವಶ್ಯಕತೆಗೆ ಅನುಗುಣವಾಗಿ ಎನ್.ಪಿ.ಕೆ ಕಾಂಪ್ಲೆಕ್ಸ್ ರಸಗೊಬ್ಬರಗಳನ್ನು ವಿತರಿಸುವ ಕಾರ್ಯ ಪ್ರಗತಿಯಲ್ಲಿರುತ್ತದೆ. ಕೆ ಕಿಸಾನ್ ತಂತ್ರಾAಶದ ಮೂಲಕವೇ ರಸಗೊಬ್ಬರಗಳನ್ನು ವಿತರಿಸುವ ಸಲುವಾಗಿ ಈಗಾಗಲೇ ಜಿಲ್ಲೆಯ ಎಲ್ಲಾ ಖಾಸಗಿ ಹಾಗೂ ಸಹಕಾರ ಸಂಘಗಳ ಪದಾಧಿಕಾರಿಗಳಿಗೆ ಅರಿವು ಮೂಡಿಸುವ ಹಾಗೂ ತರಬೇತಿ ಕಾರ್ಯಕ್ರಮಗಳನ್ನು ಕೃಷಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿರುತ್ತದೆ. ಸಹಕಾರ ಸಂಘಗಳು, ಖಾಸಗಿ ಮಾರಾಟ ಮಳಿಗೆಗಳು, ತಹಶೀಲ್ದಾರ್ ಕಚೇರಿ, ಗ್ರಾಮ ಪಂಚಾಯಿತಿಗಳು, ರೈತ ಸಂಪರ್ಕ ಕೇಂದ್ರಗಳು, ನಾಡ ಕಛೇರಿಗಳಲ್ಲಿ ಪೋಸ್ಟರ್ ಗಳ ಮೂಲಕ ಹೆಚ್ಚು ಪ್ರಚಾರ ಕೈಗೊಂಡು ರೈತರಲ್ಲಿ ಅರಿವು ಮೂಡಿಸಲಾಗಿದೆ ಎಂದು ಚಂದ್ರಶೇಖರ್ ಅವರು ತಿಳಿಸಿದ್ದಾರೆ.

ಭೌಗೋಳಿಕ ಉದ್ವಿಗ್ನತೆ ಹಾಗೂ ಹವಾಮಾನ ವೈಪರೀತ್ಯಗಳ ಪರಿಸ್ಥಿತಿಗಳಲ್ಲಿ ಯೂರಿಯಾ ಹಾಗೂ ಇನ್ನಿತರೆ ರಸಗೊಬ್ಬರಗಳ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ಸರಬರಾಜಿನಲ್ಲಿ ಅಭಾವ ಉಂಟಾಗುವ ಸಾಧ್ಯತೆ ಇರುತ್ತದೆ. ಇದಕ್ಕೆ ಸಂಬAಧಪಟ್ಟAತೆ ಕೃಷಿ ವಿಜ್ಞಾನ ಕೇಂದ್ರಗಳ ವಿಜ್ಞಾನಿಗಳು, ಕೃಷಿ ಇಲಾಖೆ ಹಾಗೂ ಕೃಷಿ ಸಂಬAಧಿತ ಇಲಾಖೆಯ ಅಧಿಕಾರಿಗಳು ಮುಂಬರುವ ದಿನಗಳಲ್ಲಿ ಹೋಬಳಿ ಮಟ್ಟದಲ್ಲಿ ರಸಗೊಬ್ಬರಗಳ ಸಮತೋಲನ ಬಳಕೆ, ನ್ಯಾನೋ ಗೊಬ್ಬರಗಳು, ಹಸಿರೆಲೆ ಗೊಬ್ಬರ ಮತ್ತು ಜೈವಿಕ ಗೊಬ್ಬರಗಳ ಬಳಕೆ, ಮಣ್ಣಿನ ಮಾದರಿ ಸಂಗ್ರಹಣೆ ಮತ್ತು ಮಣ್ಣು ಪರೀಕ್ಷೆ, ಮಣ್ಣಿನ ಪರೀಕ್ಷೆ ಆಧಾರಿತ ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಗೊಬ್ಬರ ಬಳಕೆ, ಮಣ್ಣಿನ ಆರೋಗ್ಯದ ಆಧಾರದ ಮೇಲೆ ಲಾಭದಾಯಕ ಬೆಳೆಗಳ ಗುರುತಿಸುವಿಕೆ ನೈಸರ್ಗಿಕ ಕೃಷಿ ಪದ್ಧತಿಗಳ ಪ್ರಚಾರ, ರೈತರಿಗೆ ಅನುಕೂಲವಾಗುವ ಸರ್ಕಾರದ ಯೋಜನೆಗಳ ಬಗ್ಗೆ ಜಾಗೃತಿ, ಯೂರಿಯಾ ಮತ್ತು ಡಿಎಪಿ ಗೊಬ್ಬರಗಳ ಆನ್‌ಲೈನ್ ವಿತರಣಾ ವ್ಯವಸ್ಥೆ ಮತ್ತು ದುರುಪಯೋಗ ತಡೆ ಹಾಗೂ ಇನ್ನಿತರೆ ವಿಷಯಗಳ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು “ಖೇತ್ ಬಚಾವೊ ಆಂದೋಲನ” ದ ಶೀರ್ಷಿಕೆಯಡಿ ಹಮ್ಮಿಕೊಳ್ಳಲಾಗಿದೆ.

ಮುಂಬರುವ ದಿನಗಳಲ್ಲಿ ಉಂಟಾಗಬಹುದಾದ ವ್ಯತ್ಯಯಗಳು ಹಾಗೂ ಸವಾಲಿನ ಸಂದರ್ಭಗಳನ್ನು ಸಮರ್ಥವಾಗಿ ಎದುರಿಸುವ ಉದ್ದೇಶದಿಂದ, ಸದರಿ ಕಾರ್ಯಕ್ರಮಗಳಲ್ಲಿ ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಅಗತ್ಯ ಮಾಹಿತಿಯನ್ನು ಪಡೆದು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಲಾಗಿದೆ. ಅದರ ಪ್ರಯೋಜನಗಳನ್ನು ಅವರು ಕೋರಿದ್ದಾರೆ.