ಸಿದ್ದಾಪುರ, ಜೂ. ೧೦: ಸೋಮವಾರಪೇಟೆ ತಾಲೂಕಿನಲ್ಲಿ ಎ.ಸಿ.ಎಫ್. ಆಗಿ ಕೆಲವು ವರ್ಷಗಳಿಂದ ಉತ್ತಮ ಸೇವೆ ಸಲ್ಲಿಸಿ ಇದೀಗ ನಾಗರಹೊಳೆಗೆ ವರ್ಗಾವಣೆಗೊಂಡಿರುವ ಗೋಪಾಲ್ ಎ.ಎ ಅವರಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸೇರಿ ಬೀಳ್ಕೊಡುಗೆ ಕಾರ್ಯಕ್ರಮವನ್ನು ಏರ್ಪಡಿಸಿದ್ದರು.
ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಇವರ ಸೇವೆಯ ಕುರಿತು ಅಭಿಪ್ರಾಯಗಳನ್ನು ವ್ಯಕ್ತಪಡಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಮಡಿಕೇರಿ ತಾಲೂಕು ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಹಾಗೂ ವಲಯ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.