ಬೆAಗಳೂರು, ಜೂ. ೧೦: ಕೇರಳದ ಕೊಟ್ಟಿಯೂರು ದೇವಾಲಯಕ್ಕೆ ಹೋಗಿದ್ದ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯವಾಗಿದೆ ಎಂಬ ಗಂಭೀರ ಆರೋಪದ ಕುರಿತು ಮಹಿಳೆಯೊಬ್ಬರು ಸಾಮಾಜಿಕ ತಾಣದಲ್ಲಿ ಹರಿಬಿಟ್ಟಿದ್ದ ವೀಡಿಯೋ ಎರಡು ದಿನಗಳ ಹಿಂದೆ ವೈರಲ್ ಆಗಿತ್ತು. ಅದರಲ್ಲಿ ದೇವಾಲಯದ ಸಿಬ್ಬಂದಿ ಕನ್ನಡ ಮಾತನಾಡುವ ಭಕ್ತರನ್ನು ಹಿಂದಕ್ಕೆ ತಳ್ಳಿ ಗದರಿಸಿ ಬೆದರಿಸುತ್ತಿರುವ ದೃಶ್ಯ ರಾಜ್ಯದ ಸಾವಿರಾರು ಭಕ್ತರಲ್ಲಿ ಆಕ್ರೋಶ ಹುಟ್ಟು ಹಾಕಿತ್ತು. ಯಾರೂ ಈ ದೇವಾಲಯಕ್ಕೆ ಭೇಟಿ ನೀಡಬೇಡಿ ಎಂದು ನೂರಾರು ಕನ್ನಡಿಗರು ಜಾಲ ತಾಣಗಳಲ್ಲಿ ಕರೆ ನೀಡಿ ಆಕ್ರೋಶ ಹೊರ ಹಾಕಿದ್ದರು.
ಸಾಮಾಜಿಕ ತಾಣಗಳಲ್ಲಿ ಭಕ್ತರ ಆಕ್ರೋಶ ವೈರಲ್ ಆಗುತಿದ್ದಂತೆಯೇ ಕಣ್ಣೂರು ವಲಯದ ಡಿಐಜಿ ಯತೀಶ್ ಚಂದ್ರ, ಕನ್ನಡದಲ್ಲೇ ಮಾತನಾಡಿ ಕರ್ನಾಟಕದ ಭಕ್ತರನ್ನು ಸ್ವಾಗತಿಸಿದ್ದು, ಅವರ ವೀಡಿಯೋ ವೈರಲ್ ಆಗಿದೆ.
ವೀಡಿಯೋದಲ್ಲಿ ಮಾತನಾಡಿರುವ ಅವರು, ಕೊಟ್ಟಿಯೂರು ದೇವಸ್ಥಾನದವರು ಹಾಗೂ ಸ್ಥಳೀಯ ಗ್ರಾಮ ಪಂಚಾಯಿತಿಯವರು ವೈಶಾಖ ಮಹೋತ್ಸವಕ್ಕೆ ಬಹಳ ಚೆನ್ನಾಗಿ ಸಿದ್ಧತೆ ಮಾಡಿದ್ದಾರೆ. ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಮೂಲ ಸೌಕರ್ಯ ಕಲ್ಪಿಸಲಾಗಿದೆ. ವಾಹನ ನಿಲುಗಡೆ ವ್ಯವಸ್ಥೆಯನ್ನೂ ಮಾಡಲಾಗಿದೆ. ಕರ್ನಾಟಕದಿಂದ ಬಹಳಷ್ಟು ಭಕ್ತಾದಿಗಳು ಬರುತ್ತೀರಿ. ನಿಮಗಾಗಿ ದೇವಸ್ಥಾನದ ಆವರಣದಲ್ಲಿ ಕನ್ನಡದಲ್ಲೇ ನಾಮಫಲಕಗಳು (ಬೋರ್ಡ್ಗಳು) ಮತ್ತು ಕನ್ನಡದಲ್ಲೇ ಧ್ವನಿವರ್ಧಕದ ಮೂಲಕ ಪ್ರಕಟಣೆ ಹೊರಡಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಅಲ್ಲದೆ, ಪವಿತ್ರವಾದ ಈ ಕಾಡಿನ ಸನ್ನಿಧಿಗೆ ಬರುವಾಗ ಪರಿಸರವನ್ನು ಸ್ವಚ್ಛವಾಗಿಡುವಂತೆ ಮತ್ತು ಪ್ಲಾಸ್ಟಿಕ್ ಹಾಗೂ ಬಟ್ಟೆಗಳನ್ನು ಎಲ್ಲೆಂದರಲ್ಲಿ ಎಸೆಯದೆ ಸಹಕರಿಸುವಂತೆ ಕನ್ನಡಿಗರಲ್ಲಿ ಅತ್ಯಂತ ಆಪ್ತವಾಗಿ ವಿನಂತಿಸಿಕೊAಡಿದ್ದಾರೆ. ಕ್ಯೂನಲ್ಲಿ ಆರಾಮಾಗಿ ಬಂದು ದೇವರ ದರ್ಶನ ಮಾಡಿ. ನಾವು ಪೊಲೀಸರು ಭದ್ರತೆಗೆ ಎಲ್ಲಾ ತಯಾರಿ ಮಾಡಿದ್ದೇವೆ. ತಾವೆಲ್ಲರೂ ಇಲ್ಲಿಗೆ ಬಂದು ದರ್ಶನ ಮಾಡಿ, ೨೬ ದಿನಗಳ ಈ ಮಹೋತ್ಸವವನ್ನು ಯಶಸ್ವಿಯಾಗಿಸಬೇಕು ಎಂದು ವಿನಂತಿಸಿಕೊAಡಿದ್ದು ಈ ವಿನಂತಿ ಕನ್ನಡಿಗರ ಮನ ಗೆದ್ದಿದೆ.
ಕೇರಳ ಪೊಲೀಸ್ ಅಧಿಕಾರಿಯೊಬ್ಬರ ಈ ಕನ್ನಡದ ವೀಡಿಯೋ ವೈರಲ್ ಆಗುತ್ತಿದ್ದಂತೆ, ಯಾರು ಈ ಯತೀಶ್ ಚಂದ್ರ? ಎಂದು ಹುಡುಕುವವರ ಸಂಖ್ಯೆ ಹೆಚ್ಚಾಗಿದೆ. ವಿಶೇಷವೆಂದರೆ, ಯತೀಶ್ ಚಂದ್ರ ಅವರು, ಕರ್ನಾಟಕದವರೇ ಆಗಿದ್ದು ದಾವಣಗೆರೆ ಮೂಲದವರಾದ ಇವರು ಇಂಜಿನಿಯರಿAಗ್ ಪದವಿ ಮುಗಿಸಿ ಉನ್ನತ ಹುದ್ದೆಯಲ್ಲಿದ್ದರೂ ಸಮಾಜ ಸೇವೆ ಮಾಡುವ ಹಂಬಲದಿAದ ಯುಪಿಎಸ್ಸಿ ಪರೀಕ್ಷೆ ಬರೆದು ಐಪಿಎಸ್ ಅಧಿಕಾರಿಯಾಗಿದ್ದಾರೆ. ಇವರು ೨೦೧೧ ರ ಬ್ಯಾಚ್ನ ಕೇರಳ ಕೇಡರ್ ಐಪಿಎಸ್ ಅಧಿಕಾರಿ ಆಗಿದ್ದು ೨೦೨೪ ರಲ್ಲಿ ಕಣ್ಣೂರು ರೇಂಜ್ ಡಿಐಜಿ ಆಗಿ ನೇಮಕಗೊಂಡಿದ್ದಾರೆ.
- ಕೋವರ್ಕೊಲ್ಲಿ ಇಂದ್ರೇಶ್