ಕೂಡಿಗೆ, ಜೂ. ೧೦: ಮರಗೋಡು ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಹೆಚ್.ಎಸ್. ಸಣ್ಣಕ್ಕ ಅವರಿಗೆ ಕೂಡಿಗೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗೌರವಿಸಿ, ಬೀಳ್ಕೊಡುಗೆ ನೀಡಲಾಯಿತು.
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಹೆಚ್.ಎಸ್. ಚೇತನ್ ಶಾಲು ಹೊದಿಸಿ, ಫಲ ತಾಂಬೂಲ ನೀಡಿ ಗೌರವಿಸಿದರು.
ಈ ಸಂದರ್ಭ ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎಸ್. ಪ್ರಸನ್ನ ಕುಮಾರ್, ಸೋಮವಾರಪೇಟೆ ತಾಲೂಕು ಸಂಘದ ಅಧ್ಯಕ್ಷ ಬಸವರಾಜ್, ರಾಜ್ಯ ಸಂಘಟನಾ ಕಾರ್ಯದರ್ಶಿ ಹೆಚ್.ಎನ್. ಮಂಜುನಾಥ, ಸದಸ್ಯರಾದ ಶಿವಲಿಂಗ ಸೇರಿದಂತೆ ಕೂಡಿಗೆ, ಹೆಬ್ಬಾಲೆ ಕ್ಲಸ್ಟರ್ನ ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು, ವಿದ್ಯಾರ್ಥಿಗಳು ಇದ್ದರು.