ಮಡಿಕೇರಿ, ಜೂ.೧೧: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಕ್ಕಳ ವಿಶೇಷ ಪೊಲೀಸ್ ಘಟಕ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಮಕ್ಕಳ ರಕ್ಷಣಾ ಘಟಕ, ಮಡಿಕೇರಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮವು ತಾ.೧೨ ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. ಮಡಿಕೇರಿ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಸಿ.ಕೆ.ಬಸವರಾಜ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಅಧ್ಯಕ್ಷರಾದ ಎಸ್.ಜೆ ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಹನಾ ಎಸ್.ಹಾದಿಮನಿ, ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ. ವಕೀಲರಾದ ಯಾಲದಾಳು ಮನೋಜ್ ಬೋಪಯ್ಯ ಅವರು ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಕಾಯ್ದೆ ಕುರಿತು ಉಪನ್ಯಾಸ ನೀಡಲಿದ್ದಾರೆ.