ಮಡಿಕೇರಿ, ಜೂ. ೧೧: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಲೆಯ ನಡಿಗೆ ಜನರ ಬಳಿಗೆ ಎಂಬ ವಿನೂತನ ಕಾರ್ಯಕ್ರಮವನ್ನು ಪರಿಚಯಿಸುತ್ತಿರುವುದು ಅದ್ಭುತ ಕಲ್ಪನೆ ಎಂದು ತೆನ್ನಿರ ಮೈನಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನವೀನ ಕಾರ್ಯಕ್ರಮದ ಆರಂಭಿಕ ಕಾರ್ಯಕ್ರಮವನ್ನು ಮಡಿಕೇರಿ ನಗರದ ರಿಲೆಯನ್ಸ್ ಮಾರ್ಟ್ನಲ್ಲಿ ಏರ್ಪಡಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ತೆನ್ನಿರ ಮೈನಾ ಇಂತಹ ಕಾರ್ಯಕ್ರಮಗಳಿಗೆ ಪ್ರಚಾರಪಡಿಸಿ ದರೆ ಕಲಾ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಿಸಿ ಆನಂದಿಸು ತ್ತಾರೆ ಎಂದು ಹೇಳಿದರು.

ಮೊದಲು ರಾಜಾಶ್ರಯ, ನಂತರ ಕಲಾ ಮಂದಿರ, ದೈವಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಗಳಲ್ಲಿ ಮಾತ್ರ ವೀಕ್ಷಿಸಲು ಮತ್ತು ಆಲಿಸಲು ಸಾಧ್ಯವಾಗಿದ್ದ ಕಲಾ ಕಾರ್ಯಕ್ರಮಗಳನ್ನು ಸಾರ್ವಜನಿಕ ವಾಗಿ ಎಲ್ಲರಿಗೂ ಅನುಭವಿಸಲು ಅವಕಾಶ ನೀಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಅಭಿನಂದನೆಗಳನ್ನು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಮಾತನಾಡಿ, ಪ್ರತಿ ತಿಂಗಳ ಮೊದಲನೆ ಶನಿವಾರ ಜಿಲ್ಲೆಯ ಜನನಿಬಿಡ ಪ್ರದೇಶಗಳಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗುವುದು ಎಂದು ಮಾಹಿತಿ ನೀಡಿದರು. ಹೊದ್ದೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹೆಚ್.ಎ. ಹಂಸ, ಯುವಕ ಸಂಘದ ಪದಾಧಿಕಾರಿ ಸೇರಿದಂತೆ ಮಾಲ್‌ಗೆ ಬಂದ ಗ್ರಾಹಕರು ಸಂಗೀತವನ್ನು ಆಲಿಸಿದರು.