ಮಡಿಕೇರಿ, ಜೂ.೧೧: ಮೈಸೂರು ವಿಶ್ವವಿದ್ಯಾನಿಲಯದ ಬ್ಯಾಚುಲರ್ ಆಫ್ ವಿಜ್ಯೂಯಲ್ ಆರ್ಟ್ಸ್ (ಬಿ.ವಿ.ಎ.) “ರಾಜ್ಯ ಶಿಕ್ಷಣ ಪದ್ಧತಿ’ ಯಂತೆ ನಾಲ್ಕು ವರ್ಷದ ಎಂಟು ಸೆಮಿಸ್ಟರ್‌ಗಳ ಪದವಿಗೆ ಅರ್ಜಿ ಆಹ್ವಾನಿಸಲಾಗಿದೆ.

ಮೈಸೂರು ಸಿದ್ದಾರ್ಥನಗರದ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ ೨೦೨೬-೨೭ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಬಿ.ವಿ.ಎ. ದೃಶ್ಯ ಕಲೆಯಲ್ಲಿ ಸ್ನಾತಕ ಪದವಿ ಪ್ರವೇಶಾತಿಗಾಗಿ ದ್ವಿತೀಯ ಪಿ.ಯು.ಸಿ./ಸಮಾನಾಂತರ ಕೋರ್ಸುಗಳಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ (UUಅಒS): “hಣಣs;//uuಛಿms.ಞಚಿಡಿಟಿಚಿಣಚಿಞಚಿ.gov.iಟಿ” ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ತಾ.೧೨(ಇಂದು) ಕೊನೆಯ ದಿನವಾಗಿದೆ. ಪದವಿಯಲ್ಲಿ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.

ಪ್ರವೇಶಾತಿ ಕೋರಿ ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆಮಾಡಲು ಅರ್ಹತಾ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನವನ್ನು ತಾ.೧೫ ರಂದು ನಡೆಸಲಾಗುವುದು.

ಹೆಚ್ಚಿನ ಮಾಹಿತಿಗೆ ಕಾರ್ಯಾಲಯದ ಕಚೇರಿ ಸಮಯದಲ್ಲಿ ದೂ.ಸಂ.೦೮೨೧-೨೪೩೮೯೩೧ ಅನ್ನು ಸಂಪರ್ಕಿಸಬಹುದು ಎಂದು ಮೈಸೂರು ಸಿದ್ದಾರ್ಥ ನಗರದ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ ಡೀನ್ ತಿಳಿಸಿದ್ದಾರೆ.