ಕೂಡಿಗೆ, ಜೂ ೧೧: ಅಖಿಲ ಭಾರತ ಸೈನಿಕ ಶಾಲೆಗಳ ಅಂತರ ಫುಟ್ಬಾಲ್ ಪಂದ್ಯಾವಳಿ ಪೂರ್ವ ಸುಬ್ರೊತೊ ಕಪ್ ೨೦೨೬ ಸಮಾರೋಪ ಸಮಾರಂಭ ಕೂಡಿಗೆ ಸೈನಿಕ ಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕೇರಳ ಮತ್ತು ತಮಿಳುನಾಡು ರಾಜ್ಯಗಳ ರಾಜ್ಯಪಾಲ ರಾಜೇಂದ್ರ ವಿಶ್ವನಾಥ ಅರ್ಲೇಕರ್ ಹಾಗೂ ಸಂಸದರಾದ ಯದುವೀರ್ ಒಡೆಯರ್ ಭಾಗವಹಿಸಿದ್ದರು.
ಮುಖ್ಯ ಅತಿಥಿಗಳನ್ನು ಶಾಲೆಯ ಪ್ರಾಂಶುಪಾಲರಾದ ಕರ್ನಲ್ ಅಮರ್ಜೀತ್ ಸಿಂಗ್ ಅವರು ಸಾಂಪ್ರದಾಯಿಕ ಅಶ್ವದಳದ ಮೂಲಕ ಆತ್ಮೀಯವಾಗಿ ಸ್ವಾಗತಿಸಿದರು. ಅತಿಥಿಗಳು ಶಾಲೆಯಲ್ಲಿರುವ ಯುದ್ಧಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿ ವೀರ ಯೋಧರಿಗೆ ಗೌರವ ಸಮರ್ಪಿಸಿದರು. ರಾಜ್ಯಪಾಲರಿಗೆ ಶಾಲೆಯ ವಿದ್ಯಾರ್ಥಿಗಳಿಂದ ಗೌರವ ವಂದನೆ ಸಲ್ಲಿಸಲಾಯಿತು.
ಈ ಸಂದರ್ಭ ಮಾತನಾಡಿದ ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ ಅರ್ಲೇಕರ್ ಅವರು, ದೇಶದ ವಿವಿಧ ಭಾಗಗಳಿಂದ ಆಗಮಿಸಿದ ಯುವ ಫುಟ್ಬಾಲ್ ಆಟಗಾರರ ಶಿಸ್ತು, ಸಮರ್ಪಣೆ, ತಂಡದ ಮನೋಭಾವ ಮತ್ತು ಕ್ರೀಡಾ ಸ್ಫೂರ್ತಿಯನ್ನು ಪ್ರಶಂಸಿಸಿದರು. ದೇಶಭಕ್ತಿ, ಪ್ರಾಮಾಣಿಕತೆ, ನಾಯಕತ್ವ ಮತ್ತು ರಾಷ್ಟಿçÃಯ ಸೇವೆಯ ಮೌಲ್ಯಗಳನ್ನು ಹೊಂದಿರುವ ಭವಿಷ್ಯದ ಯುವಕರನ್ನು ರೂಪಿಸುವಲ್ಲಿ ಸೈನಿಕ ಶಾಲೆಗಳ ಪಾತ್ರವನ್ನು ಒತ್ತಿ ಹೇಳಿದರು. ಶಾಲೆಯ ಸಮಗ್ರ ಶಿಕ್ಷಣ, ಕ್ರೀಡಾ ಶ್ರೇಷ್ಠತೆ, ಸಾಂಸ್ಕೃತಿಕ ಏಕತೆ ಮತ್ತು ರಾಷ್ಟç ನಿರ್ಮಾಣದ ಕಾರ್ಯಗಳನ್ನು ಶ್ಲಾಘಿಸಿದರು.
ಸಂಸದ ಯದುವೀರ್ ಒಡೆಯರ್ ಮಾತನಾಡಿ, ಶಿಕ್ಷಣ, ಕ್ರೀಡೆ, ಮೂಲಸೌಕರ್ಯ, ಶಿಸ್ತು ಹಾಗೂ ವ್ಯಕ್ತಿತ್ವ ನಿರ್ಮಾಣ ಕ್ಷೇತ್ರಗಳಲ್ಲಿ ಶಾಲೆಯ ಸಾಧನೆಯನ್ನು ಶ್ಲಾಘಿಸಿದರು. ದೇಶ ಸೇವೆ ಹಾಗೂ ನಾಯಕತ್ವಕ್ಕೆ ಬದ್ಧವಾದ ದೇಶಭಕ್ತ ಯುವಜನರನ್ನು ರೂಪಿಸುವಲ್ಲಿ ಸೈನಿಕ ಶಾಲೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.
ಶಾಲೆಯ ಪ್ರಾಂಶುಪಾಲ ಕರ್ನಲ್ ಅಮರ್ ಜೀತ್ ಸಿಂಗ್ ಮಾತನಾಡಿ, ಈ ಕಾರ್ಯಕ್ರಮ ಶಾಲೆಯ ಇತಿಹಾಸದಲ್ಲಿಯೇ ಒಂದು ಸ್ಮರಣೀಯ ಹಾಗೂ ಐತಿಹಾಸಿಕ ಕ್ಷಣವೆಂದು ಬಣ್ಣಿಸಿದರು. ಪಂದ್ಯಾವಳಿಯ ಅವಧಿಯಲ್ಲಿ ಕ್ರೀಡಾಸ್ಫೂರ್ತಿ, ಶಿಸ್ತು, ತಂಡದ ಮನೋಭಾವ ಹಾಗೂ ರಾಷ್ಟಿçÃಯ ಏಕತೆಯ ಮೌಲ್ಯಗಳು ಶಾಲಾ ಆವರಣದಲ್ಲಿ ಸ್ಪಷ್ಟವಾಗಿ ಪ್ರತಿಬಿಂಬಿಸಿದ್ದವು ಎಂದು ತಿಳಿಸಿದರು.
ಸಮಾರಂಭದ ಪ್ರಮುಖ ಆಕರ್ಷಣೆಯಾಗಿ ಭಾಗವಹಿಸಿದ ಎಲ್ಲಾ ತಂಡಗಳ ಶಿಸ್ತುಬದ್ಧ ಪಥಸಂಚಲನ ನಡೆಯಿತು. ರಾಜ್ಯಪಾಲರು ಪಥಸಂಚಲನದ ಗೌರವ ವಂದನೆಯನ್ನು ಸ್ವೀಕರಿಸಿದರು. ಬಳಿಕ ಶಾಲಾ ವಿದ್ಯಾರ್ಥಿಗಳು ಪ್ರದರ್ಶಿಸಿದ ಡೊಳ್ಳುಕುಣಿತ ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಅನಾವರಣಗೊಳಿಸಿತು.
ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳು ವಿಜೇತ ತಂಡಗಳು ಹಾಗೂ ಆಟಗಾರರಿಗೆ ಪಾರಿತೋಷಕ, ಪದಕ ಮತ್ತು ಪ್ರಮಾಣಪತ್ರಗಳನ್ನು ವಿತರಿಸಿದರು.
ಅಂಡರ್-೧೫ ಬಾಲಕರ ವಿಭಾಗದಲ್ಲಿ ಸೈನಿಕ ಶಾಲೆ ಚಂದ್ರಪುರ ಚಾಂಪಿಯನ್ ಆಗಿ ಹೊರಹೊಮ್ಮಿದರೆ, ಸೈನಿಕ ಶಾಲೆ ಇಂಫಾಲ್ ರನ್ನರ್ಅಪ್ ಸ್ಥಾನ ಪಡೆದುಕೊಂಡಿತು. ಅಂಡರ್-೧೭ ಬಾಲಕಿಯರ ವಿಭಾಗದಲ್ಲಿ ಸೈನಿಕ ಶಾಲೆ ಸುಜಾನ್ಪುರ್ ತಿರಾ ಚಾಂಪಿಯನ್ ಆಗಿ ಹೊರಹೊಮ್ಮಿದರೆ, ಸೈನಿಕ ಶಾಲೆ ಚಂದ್ರಪುರ ರನ್ನರ್ಅಪ್ ಸ್ಥಾನ ಗಳಿಸಿತು.
ಅಂಡರ್-೧೭ ಬಾಲಕರ ವಿಭಾಗದಲ್ಲಿ ಸೈನಿಕ ಶಾಲೆ ಇಂಫಾಲ್ ಚಾಂಪಿಯನ್ ಆಗಿ ಹೊರಹೊಮ್ಮಿದರೆ, ಆತಿಥೇಯ ಸೈನಿಕ ಶಾಲೆ ಕೊಡಗು ರನ್ನರ್ಅಪ್ ಸ್ಥಾನ ಪಡೆಯಿತು.
ಉಪ ಪ್ರಾಂಶುಪಾಲ ವಿಂಗ್ ಕಮಾಂಡರ್ ಮೊಹಮ್ಮದ್ ಶಾಜಿ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.