ಮಡಿಕೇರಿ, ಜೂ. ೧೧: ಪ್ರಸಕ್ತ ಸಾಲಿನ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ (ಪಿಯುಸಿ, ಡಿಪ್ಲೋಮಾ ಹಾಗೂ ಐಟಿಐ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾAಶದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

೨೦೨೬-೨೭ ನೇ ಸಾಲಿಗೆ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯ ಮಡಿಕೇರಿ ಹಾಗೂ ಕುಶಾಲನಗರದ ವಿದ್ಯಾರ್ಥಿ ನಿಲಯಗಳಿಗೆ (ಪಿಯುಸಿ, ಡಿಪ್ಲೋಮಾ ಹಾಗೂ ಐ.ಟಿ.ಐ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್‌ಲೈನ್‌ನ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾAಶದ) hಣಣಠಿs://shಠಿ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಹ ವಿದ್ಯಾರ್ಥಿಗಳು ಕೂಡಲೇ ಇದರ ಸದುಪಯೋಗ ಪಡಿಸಿಕೊಳ್ಳಲು ಕೋರಿದೆ. ಹೊಸ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಜೂನ್, ೩೦ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ.೦೮೨೭೨-೨೨೫೫೨೮/ ೨೨೦೨೧೪, ನಿಲಯಪಾಲಕರು, ಮಡಿಕೇರಿ ೯೭೪೨೧೧೬೬೦೧, ನಿಲಯಪಾಲಕರು ಕುಶಾಲನಗರ ೯೯೪೫೯೬೦೦೦೪ ಹಾಗೂ ತಾಲೂಕು ಮಾಹಿತಿ ಕೇಂದ್ರ ಸೋಮವಾರಪೇಟೆ ದೂ.ಸಂ. ೮೫೪೮೦೬೮೫೧೯, ತಾಲ್ಲೂಕು ಮಾಹಿತಿ ಕೇಂದ್ರ ವೀರಾಜಪೇಟೆ ದೂ.ಸಂ. ೯೯೦೦೭೩೧೦೩೭, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್‌ಎಂಸಿ ಕಾಲೇಜು ಹತ್ತಿರ, ಮಡಿಕೇರಿ, ಕೊಡಗು ಜಿಲ್ಲೆ ದೂ.ಸಂ. ೯೯೭೨೭೯೯೦೯೧ ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ.ದಿವಾಕರ ತಿಳಿಸಿದ್ದಾರೆ.