ಕೂಡಿಗೆ, ಜೂ. ೧೧: ಕೂಡುಮಂಗಳೂರು ಗ್ರಾಮದ ಚೌಡಮ್ಮ ತಾಯಿಯ ವಾರ್ಷಿಕ ಮಹಾ ಪೂಜೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು.
ಉತ್ಸವದ ಅಂಗವಾಗಿ ಹೋಮ ಹವನ, ವಿಶೇಷ ಪೂಜೆಗಳು ನಡೆದವು. ದೇವಾಲಯ ಸಮಿತಿ ವತಿಯಿಂದ ಅನ್ನಸಂರ್ತಪಣೆ ಏರ್ಪಡಿಸಲಾಗಿತ್ತು. ಈ ಸಂದರ್ಭ ದೇವಾಲಯ ಸಮಿತಿ ಅಧ್ಯಕ್ಷ ಕೆ.ಸಿ. ವೆಂಕಟೇಶ್, ಉಪಾಧ್ಯಕ್ಷ ಹರೀಶ್, ಕಾರ್ಯದರ್ಶಿ ಹರಿ, ಖಜಾಂಚಿ ಕಾಂತಾರಾಜ್ ಸೇರಿದಂತೆ ಸಮಿತಿ ನಿರ್ದೇಶಕರು, ಪದಾಧಿಕಾರಿಗಳು ಸೇರಿದಂತೆ ನೂರಾರು ಗ್ರಾಮಸ್ಥರು ಭಾಗವಹಿಸಿದ್ದರು.