ಕೂಡಿಗೆ, ಜೂ. ೧೧: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನವಗ್ರಾಮದಲ್ಲಿ ರೂ. ೨೦ ಲಕ್ಷ ವೆಚ್ಚದ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಭೂಮಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಶಾಸಕರು, ಕಾಮಗಾರಿಯ ಗುಣಮಟ್ಟ ಕಾಪಾಡುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಕಳೆದ ಬಾರಿ ಭೂಮಿ ಪೂಜೆ ನೆರವೇರಿಸಿದ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.

ನಂತರ ಮಾತನಾಡಿದ ಶಾಸಕರು, ಜನರ ಸಮಸ್ಯೆಗಳನ್ನು ಅರಿತು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಮುಂದೆಯೂ ಜನಪರ ಕಾರ್ಯಕ್ರಮ ಮುಂದುವರೆಸಲಾಗುವುದು ಎಂದರು.

ಈ ಸಂದರ್ಭ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಕೆ. ಮಂಜುನಾಥ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕೆ.ಬಿ. ಷಂಶುದ್ಧೀನ್, ಈರಪ್ಪ ಸೇರಿದಂತೆ ಇನ್ನಿತರರು ಹಾಜರಿದ್ದರು.