ಮಡಿಕೇರಿ ಜೂ. ೧೧: ಪ್ರಸಕ್ತ ಸಾಲಿನ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ (ssಠಿ.ಠಿosಣmಚಿಣಡಿiಛಿ ಞಚಿಡಿಟಿಚಿಣಚಿಞಚಿ.gov.iಟಿ) ನಲ್ಲಿ ಅರ್ಜಿ ಸಲ್ಲಿಸಲು ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕು ವ್ಯಾಪ್ತಿಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ದಾಖಲಾತಿಗಳೊಂದಿಗೆ ವೆಬ್‌ಸೈಟ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ (ಆದಾಯ ಮಿತಿ ೨.೫೦ ಲಕ್ಷ), ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ ಪ್ರತಿ (ಕಡ್ಡಾಯವಾಗಿ ಆಧಾರ್ ಸೀಡಿಂಗ್ ಮತ್ತು ಎನ್‌ಪಿಸಿಐ ಮ್ಯಾಪಿಂಗ್ ಮಾಡಿಸಿರತಕ್ಕದು), ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ (ಕಡ್ಡಾಯ), ಹಿಂದಿನ ವರ್ಷದ ಮಾರ್ಕ್ಸ್ ಕಾರ್ಡ್ ಪ್ರತಿ, ಇತ್ತೀಚಿನ ಭಾವಚಿತ್ರ, ಅಧ್ಯಯನ/ಬೋನಾಫೈಡ್ ಪ್ರಮಾಣ ಪತ್ರ, (ಮೆಟ್ರಿಕ್ ನಂತರದ ಕೋರ್ಸ್ಗಳಿಗೆ), ಶುಲ್ಕ ರಶೀದಿ(ಮೆಟ್ರಿಕ್ ನಂತರದ ಕೋರ್ಸ್ಗಳಿಗೆ), ತಂದೆ/ತಾಯಿ/ಪೋಷಕರ ಆಧಾರ್ ಪ್ರತಿ, ಆದಾಯ ಮಿತಿ ೨.೫೦ ಲಕ್ಷಕ್ಕಿಂತ ಒಳಗಿರುವ ಸಿಇಟಿ ಮೂಲಕ ಎಂಬಿಬಿಎಸ್, ಬಿಡಿಎಸ್, ಬಿಇ, ಬಿಟೆಕ್, ಬಿ.ಆರ್‌ಕೆ ಕೋರ್ಸ್ಗಳಿಗೆ ಆಯ್ಕೆಯಾಗುವ ವಿದ್ಯಾರ್ಥಿಗಳು ಮಾತ್ರ ಸರ್ಕಾರಿ, ಅನುದಾನಿತ, ಅನುದಾನರಹಿತ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾನಿಲಯದ ಕಾಲೇಜು/ಸಂಸ್ಥೆಗಳಲ್ಲಿ ಪ್ರವೇಶ ಪಡೆದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಶೇ.೧೦೦ ರಷ್ಟು ಆಯಾಯ ಸಂಸ್ಥೆಗಳಿಗೆ ನಿಗದಿಪಡಿಸಿದ ಶುಲ್ಕ ಪಡೆಯಲು ಅರ್ಹರಿರುತ್ತಾರೆ. ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್ (ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.goviಟಿ) ಮಾಹಿತಿಗೆ ಸಹಾಯವಾಣಿ ಸಂಖ್ಯೆ ೦೮೦-೪೪೫೫೪೪೫೫ ಮತ್ತು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆರವರ ಕಚೇರಿ ದೂರವಾಣಿ ೯೪೮೦೮೪೩೧೫೬, ೦೮೨೭೬-೨೮೧೧೧೫ನ್ನು ಸಂಪರ್ಕಿಸ ಬಹುದು ಎಂದು ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.