ಚೆಯ್ಯಂಡಾಣೆ, ಜೂ. ೧೨: ಚಲಿಸುತ್ತಿದ್ದ ಆಟೋರಿಕ್ಷಾದ ಮೇಲೆ ಮರವೊಂದು ಉರುಳಿ ಬಿದ್ದ ಪರಿಣಾಮ ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಕ್ಕಬ್ಬೆ ನೆಲಜಿ ರಸ್ತೆಯಲ್ಲಿ ಗುರುವಾರ ರಾತ್ರಿ ನಡೆದಿದೆ.

ಕಕ್ಕಬ್ಬೆ ಕುಂಜಿಲ ಗ್ರಾಮದ ನಿವಾಸಿ ಆಟೋ ಚಾಲಕ ಪಿ. ಎ.ಮಹಮೂದ್ ಎಂಬವರು ಗುರುವಾರ ರಾತ್ರಿ ತಮ್ಮ ಆಟೋದಲ್ಲಿ ಕಕ್ಕಬ್ಬೆಯಿಂದ ನೆಲಜಿ ಕಡೆಗೆ ಬಾಡಿಗೆ ತೆರಳಿ ಹಿಂತಿರುಗಿ ಬರುವ ಸಂದರ್ಭ ಆಕಸ್ಮಿಕವಾಗಿ ರಸ್ತೆ ಬದಿಯ ತೋಟದಿಂದ ಮರವೊಂದು ಆಟೋರಿಕ್ಷಾದ ಮೇಲೆ ಉರುಳಿ ಬಿದ್ದಿದೆ. ಅವಘಡದಿಂದ ಚಾಲಕ ಮಹಮೂದ್ ಅವರ ತಲೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆÀÉಗೆ ಸಾಗಿಸÀಲಾಗಿದೆ. ಆಟೋದಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಆಟೋ ಮೇಲೆ ಬಿದ್ದ ಮರವನ್ನು ತೆರವುಗೊಳಿಸಿದ ಸ್ಥಳೀಯರು ಗಾಯಾಳುಗಳನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮರ ಬಿದ್ದ ಪರಿಣಾಮ ಆಟೋರಿಕ್ಷಾ ಸಂಪೂರ್ಣ ಜಖಂಗೊAಡಿದ್ದು ವಿದ್ಯುತ್ ಕಂಬಕ್ಕೂ ಹಾನಿಯಾಗಿದೆ. ಸ್ಥಳಕ್ಕೆ ನಾಪೋಕ್ಲು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. - ಅಶ್ರಫ್