ಮುಳ್ಳೂರು, ಜೂ. ೧೨: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೊಡಗು ಜಲ್ಲಾ ಘಟಕ ಮತ್ತು ಯುವ ಘಟಕ ಸಂಯುಕ್ತ ಆಶ್ರಯದಲ್ಲಿ ತಾ. ೧೩ ರಂದು (ಇಂದು) ಸಮೀಪದ ಗುಡುಗಳಲೆ ಜಯದೇವ ಜಾನುವಾರುಗಳ ಜಾತ್ರಾ ಮೈದಾನದಲ್ಲಿ ಬಸವ ಜಯಂತಿ, ಸಿದ್ದಗಂಗಾ ಮಠದ ಶ್ರೀ ಡಾ.ಶಿವಕುಮಾರ ಸ್ವಾಮೀಜಿಗಳ ಜಯಂತಿ, ಜಗದ್ಗುರು ರೇಣುಕಾಚಾರ್ಯ ಜಯಂತಿ, ಹಾಲೇರಿ ಅರಸ ಮತ್ತು ಸ್ವಾತಂತ್ರö್ಯ ಹೋರಾಟಗಾರ ಹೆಮ್ಮನೆ ಪುಟ್ಟಬಸಪ್ಪ ಅವರ ಸಂಸ್ಮರಣೋತ್ಸವ ಕಾರ್ಯಕ್ರಮ ನಡೆಯಲಿದೆ.
ಬೆಳಿಗ್ಗೆ ೧೦.೩೦ ಗಂಟೆಯಿAದ ನಡೆಯುವ ಕಾರ್ಯಕ್ರಮದಲ್ಲಿ ತುಮಕೂರು ಸಿದ್ದಗಂಗಾ ಮಠದ ಕಿರಿಯ ಸ್ವಾಮೀಜಿ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಜಿಲ್ಲೆಯ ವಿವಿಧ ಮಠಾಧೀಶರು ಭಾಗವಹಿಸಲಿದ್ದು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟಿçÃಯ ಅಧ್ಯಕ್ಷ ಮತ್ತು ಸಚಿವ ಈಶ್ವರ ಖಂಡ್ರೆ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರಂಭವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯಾಧ್ಯಕ್ಷ ಶಂಕರ್ ಬಿದರಿ ಪ್ರತಿಭಾ ಪುರಸ್ಕಾರ ವಿತರಣೆ ಮಾಡಲಿದ್ದು,ಸಂಸದ ಯದುವೀರ್ ಒಡೆಯರ್ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಭಾವಚಿತ್ರ ಅನಾವರಣಗೊಳಿಸಲಿದ್ದಾರೆ.