ಕುಶಾಲನಗರ, ಜೂ. ೧೨: ತಾ. ೨೩ ರಂದು ಕುಶಾಲನಗರದಲ್ಲಿ ಹಮ್ಮಿಕೊಂಡಿರುವ ಕೊಡಗು ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನದ ಕಾರ್ಯ ಚಟುವಟಿಕೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಗರದ ಸೋಮೇಶ್ವರ ದೇವಾಲಯ ರಸ್ತೆಯ ಮೂರನೇ ತಿರುವಿನ ಬಿ. ನಟರಾಜು ಎಂಬವರ ನಿವಾಸದಲ್ಲಿ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನದ ಕಚೇರಿಯನ್ನು ಆರಂಭಿಸಲಾಯಿತು.

ಕೊಡಗು ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಹೆಚ್.ವಿ. ಶಿವಪ್ಪ, ಸಮ್ಮೇಳನ ಸಮಿತಿಯ ಪದಾಧಿಕಾರಿಗಳು ಅಚ್ಚುಕಟ್ಟಾಗಿ ಹಾಗೂ ಶಿಸ್ತುಬದ್ಧವಾಗಿ ಕಾರ್ಯಯೋಜನೆ ರೂಪಿಸಬೇಕು ಎಂದರು.

ಎಪಿಸಿಎAಎಸ್ ಅಧ್ಯಕ್ಷ ಹೆಚ್.ಬಿ. ಚಂದ್ರಪ್ಪ ಮಾತನಾಡಿ, ಸಮ್ಮೇಳನದ ಅಧ್ಯಕ್ಷರ ಮೆರವಣಿಗೆ ಅತ್ಯಂತ ಶಿಸ್ತುಬದ್ಧವಾಗಿ ನಡೆಯಬೇಕಿದೆ. ಸಮ್ಮೇಳನ ಸಮಿತಿಯ ಪದಾಧಿಕಾರಿಗಳು ಸರ್ವ ಜನರನ್ನು ಸಮ್ಮೇಳನಕ್ಕೆ ಆಹ್ವಾನಿಸುವ ಮೂಲಕ ಸಮ್ಮೇಳನವನ್ನು ಊರಿನ ಹಬ್ಬವಾಗಿ ಆಚರಿಸಬೇಕೆಂದು ಕರೆ ನೀಡಿದರು.

ಮಹಾಸಭಾ ಪ್ರಧಾನ ಕಾರ್ಯದರ್ಶಿ ಶಾಂಭ ಶಿವಮೂರ್ತಿ, ಉಪಾಧ್ಯಕ್ಷ ಉದಯಕುಮಾರ್, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್. ಮೂರ್ತಿ ಪ್ರಧಾನ ಕಾರ್ಯದರ್ಶಿ ಬಿ. ನಟರಾಜು, ಕದಳಿ ವೇದಿಕೆ ಜಿಲ್ಲಾ ಅಧ್ಯಕ್ಷೆ ಸರೋಜಾ ಆರಾಧ್ಯ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಮೋಹನ್ ಹಕ್ಕೆ, ಅಕ್ಕನ ಬಳಗದ ಅಧ್ಯಕ್ಷೆ ಕಮಲ ಉದಯಕುಮಾರ್, ಕದಳಿ ವೇದಿಕೆ ಕುಶಾಲನಗರ ತಾಲೂಕು ಅಧ್ಯಕ್ಷೆ ಹೇಮಲತಾ, ಸೋಮವಾರಪೇಟೆ ತಾಲೂಕು ಅಧ್ಯಕ್ಷೆ ಉಷಾ ಗುರುಪ್ರಸಾದ್, ಅಕ್ಕನ ಬಳಗದ ಗೌರವಾಧ್ಯಕ್ಷೆ ವಿಜಯಾ ಪಾಲಾಕ್ಷ, ತೊರೆನೂರು ಸಹಕಾರ ಸಂಘದ ಅಧ್ಯಕ್ಷ ಟಿ.ಬಿ. ಜಗದೀಶ್, ಕುಶಾಲನಗರ ಸಹಕಾರ ಸಂಘದ ಉಪಾಧ್ಯಕ್ಷೆ ನೇತ್ರಾವತಿ, ಸಮ್ಮೇಳನದ ವಿವಿಧ ಸಮಿತಿಗಳ ಅಧ್ಯಕ್ಷರಾದ ಎಸ್. ನಂದೀಶ್, ಪರಮೇಶ್, ಡಾ. ಹೇಮಲತಾ, ಶಿವಲಿಂಗು, ಮೋಹಿನಿ ನಟರಾಜು, ಮನುದೇವಿ ಇತರರಿದ್ದರು.

ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ

ತಾ. ೨೩ ರಂದು ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಶರಣ ಸಾಹಿತ್ಯ ಸಮ್ಮೇಳನವನ್ನು ಕುಶಾಲನಗರದ ರೈತ ಸಹಕಾರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಶರಣ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದ ಬಳಿಕ ಸಂಜೆ ೬ ಗಂಟೆಯಿAದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮ ಕೊಡಲು ಇಚ್ಛಿಸುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತಾ. ೧೫ ರೊಳಗಾಗಿ ತಮ್ಮ ಹೆಸರುಗಳನ್ನು ನೋಂದಾಯಿಸಲು ಸಮ್ಮೇಳನ ಸಮಿತಿಯ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಎಸ್. ನಂದೀಶ್ ತಿಳಿಸಿದ್ದಾರೆ. ಶರಣರ ವಚನ ಗೀತೆಗಳು, ಜನಪದ ಗೀತೆಗಳು, ಭರತ ನಾಟ್ಯ, ಸಮೂಹ ನೃತ್ಯ, ಶರಣರ ಛದ್ಮವೇಷಗಳು, ಶರಣರ ರೂಪಕಗಳು ಹಾಗೂ ಕಿರು ನಾಟಕಗಳಿಗೆ ಅವಕಾಶ ಇರುತ್ತದೆ. ಆಸಕ್ತರು ತಮ್ಮ ಹೆಸರನ್ನು ಮೊಬೈಲ್ ಸಂಖ್ಯೆ ೯೪೮೧೦೭೨೩೭೨ ನಲ್ಲಿ ನೋಂದಾಯಿಸಬೇಕೆAದು ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಬಿ. ನಟರಾಜು ಕೋರಿದ್ದಾರೆ.