ವೀರಾಜಪೇಟೆ, ಜೂ. ೧೨: ವಿದ್ಯಾರ್ಥಿಗಳು ದೇಶದ ಅಭಿವೃದ್ಧಿಯ ರೂವಾರಿಗಳು. ಸಮಾಜ ನೀಡುವ ಸವಾಲುಗಳನ್ನು ಧೈರ್ಯದಿಂದ ಎದುರಿಸಬೇಕು ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಅವರು ಅಭಿಪ್ರಾಯಪಟ್ಟರು. ವೀರಾಜಪೇಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕಾಲೇಜು ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಓದುಗಾರಿಕೆ ಜೊತೆ ವಿವಿಧ ಕೌಶಲ್ಯಗಳನ್ನು ರೂಢಿಸಿಕೊಂಡು ಸಮಾಜದಲ್ಲಿ ಕೆಡುಕು ಉಂಟುಮಾಡದೆ ಸತ್ಪçಜೆಗಳಾಗಿ ಬಾಳುವಂತೆ ಕರೆ ನೀಡಿದರು. ಮುಖ್ಯ ಅತಿಥಿಗಳಾದ ಭಾಗಮಂಡಲ ಕಾವೇರಿ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೆ.ಜೆ. ದಿವಾಕರ ಕುಂದಲ್ಪಾಡಿ ಮಾತನಾಡಿ, ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ತಂದೆ - ತಾಯಿಯರನ್ನು ಚೆನ್ನಾಗಿ ನೋಡಿಕೊಳ್ಳುವಂತೆ ಸಲಹೆಯಿತ್ತರು.
ಕಾಲೇಜಿನ ಪ್ರಾಂಶುಪಾಲೆ ಪ್ರೊ. ಸರಸ್ವತಿ ಡಿ.ಕೆ. ಅಧ್ಯಕ್ಷತೆ ವಹಿಸಿದ್ದರು. ಸಾಂಸ್ಕöÈತಿಕ ಸಮಿತಿ ಸಂಚಾಲಕ ಪ್ರೊ. ಬಸವರಾಜು ಕೆ. ಅವರು ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು. ವಿದ್ಯಾರ್ಥಿ ಕ್ಷೇಮಪಾಲನ ಸಮಿತಿ ಸಂಚಾಲಕ ಪ್ರೊ. ದಯಾನಂದ ಕೆ.ಸಿ., ಕ್ರೀಡಾ ಸಮಿತಿ ಸಂಚಾಲಕ ಪ್ರೊ. ಗುರುಪ್ರಸಾದ್ ಎನ್. ಕಾರ್ಯಕ್ರಮ ನಿರ್ವಹಿಸಿದರು.
ಇದೇ ಸಂದರ್ಭದಲ್ಲಿ ವರ್ಷದ ಅತ್ಯುತ್ತಮ ವಿದ್ಯಾರ್ಥಿ ಪ್ರಶಸ್ತಿಯನ್ನು ತೃತೀಯ ಬಿ.ಎ ವಿದ್ಯಾರ್ಥಿನಿ ಕೀರ್ತನ ಪಡೆದರು. ವರ್ಷದ ಅತ್ಯುತ್ತಮ ವಿದ್ಯಾರ್ಥಿ ನಾಯಕ ಪ್ರಶಸ್ತಿಯನ್ನು ತೃತೀಯ ಬಿಎ ವಿದ್ಯಾರ್ಥಿ ನಿಶಾನ್ ಜೋಸೆಫ್, ವರ್ಷದ ಅತ್ಯುತ್ತಮ ಶ್ರದ್ಧಾ ವಿದ್ಯಾರ್ಥಿಯಾಗಿ ದರ್ಶನ್, ವರ್ಷದ ಅತ್ಯುತ್ತಮ ಕ್ರೀಡಾಪಟುವಾಗಿ ರಸೀನಾ, ವರ್ಷದ ಅತ್ಯುತ್ತಮ ಸಾಂಸ್ಕöÈತಿಕ ಪ್ರತಿಭೆಯಾಗಿ ಸುಹೈರಾ ಆಯ್ಕೆಯಾದರು. ರಾಷ್ಟಿçÃಯ ಸೇವಾ ಯೋಜನೆಯ ಅತ್ಯುತ್ತಮ ಸ್ವಯಂಸೇವಕರಾಗಿ ತೃತೀಯ ಬಿ.ಎ ವಿದ್ಯಾರ್ಥಿಗಳಾದ ಮಂಜು, ಚಂದ್ರಶೇಖರ, ಪುನೀತ್, ಕುಮಾರ್, ಸೋನಾ, ನಿವಿತಾ ಆಯ್ಕೆಯಾಗಿದ್ದು ಇವರನ್ನು ಸನ್ಮಾನಿಸಲಾಯಿತು. ಸಾಂಸ್ಕöÈತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸ ಲಾಯಿತು ಹಾಗೂ ಕಾಲೇಜಿನ ವಾರ್ಷಿಕ ಸಂಚಿಕೆÀ ವಿರಾಜಮಾರ್ಗವನ್ನು ಅತಿಥಿಗಳಿಂದ ಬಿಡುಗಡೆಗೊಳಿಸಲಾಯಿತು.