ಮಡಿಕೇರಿ, ಜೂ.೧೨: ಮಡಿಕೇರಿಯ ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಸಹಕಾರ ತರಬೇತಿ ಸಂಸ್ಥೆಯು ಜುಲೈ ೧ ರಿಂದ ೬ ತಿಂಗಳ ಅವಧಿಗೆ ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್ ಸಹಕಾರ ತರಬೇತಿಯನ್ನು ನಡೆಸಲಿದೆ. ಕೊಡಗು, ಹಾಸನ ಹಾಗೂ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕುಗಳು ಈ ತರಬೇತಿ ಸಂಸ್ಥೆಯ ವ್ಯಾಪ್ತಿಯಲ್ಲಿ ಬರಲಿದ್ದು, ಅರ್ಜಿ ಆಹ್ವಾನಿಸಲಾಗಿದೆ. ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್ ತರಬೇತಿ ಪಡೆಯಲು ಕನಿಷ್ಟ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು; ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳು ಸಾಮಾನ್ಯ ಅಭ್ಯರ್ಥಿಗಳಿಗೆ ರೂ.೫೦೦ ಶಿಷ್ಯವೇತನ ಮತ್ತು ವಿಶೇಷ ನಿರುದ್ಯೋಗ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ.೬೦೦ ಶಿಷ್ಯವೇತನ ನೀಡಲಾಗುವುದು ಹಾಗೂ ಪ್ರವೇಶ ಪಡೆದ ಅಭ್ಯರ್ಥಿಗಳಿಗೆ ಉಚಿತ ವಸತಿ ಗೃಹದ ವ್ಯವಸ್ಥೆ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ.

ಅರ್ಜಿಗಳನ್ನು ಪಡೆಯುವ ಸ್ಥಳ : ೧. ಪ್ರಾಂಶುಪಾಲರು, ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್, ಮುತ್ತಪ್ಪ ದೇವಸ್ಥಾನದ ಹತ್ತಿರ, ಅಬ್ಬಿಫಾಲ್ಸ್ ರಸ್ತೆ, ಮಡಿಕೇರಿ -೫೭೧೨೦೧, ದೂರವಾಣಿ ಸಂಖ್ಯೆ: ೯೯೦೨೧೮೯೮೭೨

೨. ಮುಖ್ಯಕಾರ್ಯನಿರ್ವಹಣಾಧಿಕಾರಿ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ನಿ., ಪೆನ್ಷನ್‌ಲೇನ್, ನಗರಸಭೆ ಹಿಂಭಾಗ ರಸ್ತೆ, ಮಡಿಕೇರಿ-೫೭೧೨೦೧, ದೂರವಾಣಿ ಸಂಖ್ಯೆ: ೮೦೭೩೭೯೩೬೬೯

೩. ಮುಖ್ಯಕಾರ್ಯನಿರ್ವಹಣಾಧಿಕಾರಿ, ಹಾಸನ ಜಿಲ್ಲಾ ಸಹಕಾರ ಯೂನಿಯನ್, ನಿ., ಹಳೇ ಬಸ್ ನಿಲ್ದಾಣದ ಹತ್ತಿರ, ಹಾಸನ-೫೭೩೨೦೧, ದೂರವಾಣಿ ಸಂಖ್ಯೆ: ೯೮೪೫೨೫೩೬೩೯ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೯೬೬೩೧೫೩೯೨೨, ೮೭೬೨೯೨೫೮೬೨, ೮೭೬೨೧೧೦೯೫೨ ಸಂಪರ್ಕಿಸಲು ಕೋರಿದೆ.