ಮಡಿಕೇರಿ, ಜೂ. ೧೨: ಕೊಡಗು ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾಡಳಿತ, ಜಿ.ಪಂ., ನೀಮಾ ಕೊಡಗು ಹಾಗೂ ವಿವಿಧ ಯೋಗ ಸಂಸ್ಥೆಗಳ ಸಹಯೋಗದೊಂದಿಗೆ ತಾ.೨೧ ರಂದು ೧೨ನೇ ಅಂತರರಾಷ್ಟಿçÃಯ ಯೋಗ ದಿನಾಚರಣೆಯನ್ನು ನಗರದ ಕಾವೇರಿ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ. ಶೈಲಜಾ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ ೬.೪೫ ಗಂಟೆಗೆ ಉದ್ಘಾಟನೆ ನಡೆಯಲಿದ್ದು, ಬೆಳಗ್ಗೆ ೭ ರಿಂದ ೮ ಗಂಟೆಯವರೆಗೆ ಯೋಗ ಪ್ರಾತ್ಯಕ್ಷಿಕೆ ನಡೆಯಲಿದೆ. ತಾ.೧೯ ರಂದು ಸಂಜೆ ೫ ಗಂಟೆಗೆ ಯೋಗಾಸನಗಳ ಪೂರ್ವಾಭ್ಯಾಸವನ್ನು ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ನಡೆಸಲಾಗುವುದು. ತಾ.೧೬ ರಂದು ಬೆಳಗ್ಗೆ ೮.೩೦ ಗಂಟೆಗೆ ಗಾಂಧಿ ಮೈದಾನದಿಂದ ಜನರಲ್ ತಿಮ್ಮಯ್ಯ ವೃತ್ತ, ಹಳೆಯ ಖಾಸಗಿ ಬಸ್ ನಿಲ್ದಾಣ, ಇಂದಿರಾಗಾAದಿ ವೃತ್ತದಿಂದ ಗಾಂಧಿ ಮೈದಾನದವರೆಗೆ ಯೋಗ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ವೈದ್ಯಾಧಿಕಾರಿ ಡಾ.ಅರುಣ್ ಮಾತನಾಡಿ, ಇಲಾಖೆ ವತಿಯಿಂದ ಪ್ರತಿಯೊಬ್ಬರಿಗೂ ಯೋಗ ತಲುಪಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ, ನ್ಯಾಯಾಲಯ, ಸರ್ಕಾರಿ ಕಚೇರಿ, ಸರ್ಕಾರೇತರ ಸಂಸ್ಥೆಗಳಲ್ಲಿ ೧೦-೧೫ ನಿಮಿಷ ಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಆಸಕ್ತರು ಣಣಠಿ://ಚಿ.ಚಿಣ.ಥಿಚಿ?ಡಿಜಿ=ಏಚಿಡಿಟಿಚಿಣಚಿಞಚಿ ಲಿಂಕ್ ಬಳಸಿ ಆನ್‌ಲೈನ್‌ನಲ್ಲಿ ಯೋಗ ತರಬೇತಿ ಪಡೆಯಬಹುದು. ತಾ.೨೨ರಂದು ಆನ್‌ಲೈನ್‌ನಲ್ಲಿ ಗೂಗಲ್ ಮೀಟ್ ಮೂಲಕ ಸ್ಥಳೀಯ ಯೋಗ ತರಬೇತುದಾರರಿಂದ ಬೆಳಿಗ್ಗೆ ೫.೩೦ ರಿಂದ ೫.೩೦ರವರೆಗೆ ೪೫ ನಿಮಿಷ ಯೋಗ ತರಬೇತಿ ಮತ್ತು ೧೫ ನಿಮಿಷ ನುರಿತ ವೈದ್ಯರಿಂದ ಆರೋಗ್ಯಕ್ಕೆ ಸಂಬAಧಿಸಿದAತೆ ಉಪನ್ಯಾಸ ನೀಡಲಾಗುವುದು ಎಂದು ವಿವರಿಸಿದರು.

ಯೋಗ ಶಿಕ್ಷಕ ಕೆ.ಕೆ.ಮಹೇಶ್ ಕುಮಾರ್ ಮಾತನಾಡಿ, ಯೋಗವು ಶರೀರ ಮತ್ತು ಮನಸ್ಸನ್ನು ಸದೃಢಗೊಳಿಸುತ್ತದೆ. ಆದ್ದರಿಂದ ಪ್ರತಿಯೊಬ್ಬರು ಯೋಗ ಮಾಡುವುದು ಅಗತ್ಯವಾಗಿದೆ. ಈ ಕಾರ್ಯಕ್ರಮಕ್ಕೆ ಆಸಕ್ತ ಯೋಗಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ಸಿಗೊಳಿಸಬೇಕು ಎಂದು ಮನವಿ ಮಾಡಿದರು.

ನೀಮಾ ಕೊಡಗು ಜಿಲ್ಲಾಧ್ಯಕ್ಷ ಡಾ. ರಾಜರಾಮ್ ಮಾತನಾಡಿ, ಯೋಗ ದಿನಾಚರಣೆ ಹಿನ್ನೆಲೆ ಯೋಗ ಕೇಂದ್ರಗಳಿAದ ಸೆಲ್ಫಿ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಹೆಚ್ಚು ಸೆಲ್ಫಿ ಕಳುಹಿಸಿದವರಿಗೆ ಬಹುಮಾನ ನೀಡಲಾಗುವುದು ಎಂದು ವಿವರಿಸಿದರು.

ಗೋಷ್ಠಿಯಲ್ಲಿ ಪ್ರಮುಖರಾದ ಸುಧಾಕರ್, ಕೆ.ಟಿ.ಕಾರ್ಯಪ್ಪ ಉಪಸ್ಥಿತರಿದ್ದರು.