ಪೊನ್ನಂಪೇಟೆ, ಜೂ. ೧೨: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಲ್ಪಸಂಖ್ಯಾತ ಪ್ರಮುಖರ ನಿಯೋಗವೊಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿತು.
ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಮಾಜಿ ಅಧ್ಯಕ್ಷ ಆಲೀರ ಎಂ. ರಶೀದ್ ನೇತೃತ್ವದ ನಿಯೋಗ ಮುಂದಿನ ಸಂಪುಟ ಪುನರ್ ರಚನೆ ಸಂದರ್ಭ ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಮಂತ್ರಿ ಸ್ಥಾನ ಕೊಡಿಸಲು ಸಂಬAಧಿಸಿದವರಿಗೆ ಸೂಕ್ತ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿತು. ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಸಂಘಟಿಸಲು ಸಚಿವ ಸಂಪುಟದಲ್ಲಿ ಕೊಡಗಿಗೆ ಪ್ರಾತಿನಿತ್ಯ ಅತ್ಯಗತ್ಯ ಎಂದು ನಿಯೋಗದ ಪ್ರಮುಖರು ಸಿದ್ದರಾಮಯ್ಯ ಅವರ ಗಮನ ಸೆಳೆದರು.
ಕಳೆದ ಹಲವು ದಶಕಗಳಿಂದ ಕೊಡಗಿನಲ್ಲಿ ಕಾಂಗ್ರೆಸ್ ಪಕ್ಷದ ಬೆನ್ನೆಲುಬಾಗಿ ನಿಂತಿರುವ ಜಿಲ್ಲೆಯ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರಿಗೆ ರಾಜ್ಯಮಟ್ಟದಲ್ಲಿ ಸೂಕ್ತ ರಾಜಕೀಯ ಸ್ಥಾನಮಾನಗಳನ್ನು ಕಲ್ಪಿಸಿ ಸಾಮಾಜಿಕ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದರು. ನಿಯೋಗದ ಬೇಡಿಕೆಗಳನ್ನು ಆಲಿಸಿದ ಸಿದ್ದರಾಮಯ್ಯ ಅವರು ಈ ಕುರಿತು ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದ್ದಾರೆ ಎಂದು ಆಲೀರ ಎಂ. ರಶೀದ್ ತಿಳಿಸಿದ್ದಾರೆ.
ನಿಯೋಗದಲ್ಲಿ ಕೆದಮುಳ್ಳೂರು ಗ್ರಾ.ಪಂ. ಮಾಜಿ ಸದಸ್ಯ ಎಂ.ಎA. ಇಸ್ಮಾಯಿಲ್, ಡಿಸಿಸಿ ಸದಸ್ಯರು ಮತ್ತು ಹಾಲುಗುಂದ ಗ್ರಾ.ಪಂ. ಮಾಜಿ ಸದಸ್ಯ ಕೆ.ಎ. ಅಬ್ದುಲ್ ರಹಿಮಾನ್ (ಅಂದಾಯಿ), ನರಿಯಂದಡ ಗ್ರಾ.ಪಂ. ಮಾಜಿ ಸದಸ್ಯ ಕಡಂಗದ ಸಿ.ಇ. ಜ್ಹುಬೈರ್, ಎಡಪಾಲದ ಕೆ.ಇ. ಮೊಹಮ್ಮದ್, ಕುಂಜಿಲ ಗ್ರಾ.ಪಂ. ಮಾಜಿ ಸದಸ್ಯ ಕುಂಡAಡ ರಜ್ಹಾಕ್, ಮಡಿಕೇರಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಚೆರಿಯಪರಂಬುವಿನ ಪರವಂಡ ಎ. ಸಿರಾಜ್ ಹಾಗೂ ಮತ್ತಿತರರು ಇದ್ದರು.