ಕೂಡಿಗೆ, ಜೂ. ೧೪: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನವಗ್ರಾಮದಲ್ಲಿ ರೂ. ೨೫ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಕಾಂಕ್ರೀಟ್ ರಸ್ತೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಿದರು.
ಇದೇ ಸಂದರ್ಭ ರೂ. ೨೦ ಲಕ್ಷ ವೆಚ್ಚದ ಮತ್ತೊಂದು ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ. ಮಂತರ್ ಗೌಡ ಭೂಮಿಪೂಜೆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಕುಶಾಲನಗರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಜಿಲ್ಲಾ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ಕೆ.ಕೆ. ಮಂಜುನಾಥ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಕೆ.ಬಿ. ಶಂಶುದ್ದೀನ್ ಹಾಗೂ ಈರಪ್ಪ, ಗ್ರಾಮದ ಅಧ್ಯಕ್ಷ ಜವರೇಗೌಡ ಸೇರಿದಂತೆ ಗ್ರಾಮದ ಪ್ರಮುಖರು ಮತ್ತು ನವಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು.