ಸೋಮವಾರಪೇಟೆ : ತಾಲೂಕಿನ ನಂದಿಗುAದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗೂ ಲೇಖನ ಸಾಮಗ್ರಿ ವಿತರಣೆ ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಉಪಾಧ್ಯಕ್ಷ ರಾಜಶೇಖರ್ ಗೌಡ ಅವರು, ಸರ್ಕಾರಿ ಶಾಲೆಗಳನ್ನು ಉಳಿಸಿ, ಬೆಳೆಸುವ ಹಾಗೂ ಅಲ್ಲಿನ ಮೂಲಸೌಕರ್ಯಗಳನ್ನು ಉತ್ತಮಪಡಿಸುವ ಪವಿತ್ರ ಕರ್ತವ್ಯ ಪ್ರತಿಯೊಬ್ಬ ನಾಗರಿಕನ ಮೇಲಿದೆ ಎಂದು ಅಭಿಪ್ರಾಯಿಸಿದರು.

ಲೇಖನ ಸಾಮಗ್ರಿಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಉನ್ನತ ಮಟ್ಟಕ್ಕೆ ಬೆಳೆಯಬೇಕು ಎಂದು ಆಶಿಸಿದರು.

ಮುಖ್ಯ ಅತಿಥಿಯಾಗಿದ್ದ ಕರವೇ ಕುಶಾಲನಗರ ತಾಲೂಕು ಅಧ್ಯಕ್ಷ ಶಿವಣ್ಣ ಮಾತನಾಡಿ, ಇಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳೂ ಸಹ ಗುಣಮಟ್ಟದ ಶಿಕ್ಷಣ ನೀಡುತ್ತಿವೆ. ವಿದ್ಯಾರ್ಥಿಗಳು ಯಾವುದೇ ಖಾಸಗಿ ಶಾಲೆಗೆ ಕಮ್ಮಿಯಿಲ್ಲದಂತೆ ಶ್ರದ್ಧೆಯಿಂದ ಓದಿ, ಪೋಷಕರಿಗೆ ಹಾಗೂ ಶಾಲೆಗೆ ಕೀರ್ತಿ ತರಬೇಕು ಎಂದರು.

ಇದೇ ಸಂದರ್ಭದಲ್ಲಿ ನಂದಿಗುAದ ಶಾಲಾ ವಿದ್ಯಾರ್ಥಿಗಳಿಗೆ ಕರವೇ ಮೂಲಕ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದ ದಾನಿ ನಳಿನಿ ರಾಜಶೇಖರ್ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕರವೇ ಸ್ವಾಭಿಮಾನಿ ಬಣದ ಕೊಡಗು ಜಿಲ್ಲಾಧ್ಯಕ್ಷ ಫ್ರಾನ್ಸಿಸ್ ಡಿಸೋಜ, ಜಿಲ್ಲಾ ಗೌರವಾಧ್ಯಕ್ಷ ಚಂದ್ರು, ಮಹಿಳಾ ಘಟಕದ ಅಧ್ಯಕ್ಷೆ ಜಯಶ್ರೀ ಮುರುಗೇಶ್, ಜಿಲ್ಲಾ ಸಲಹೆಗಾರ ಸಜಿಲ್ ಕುಮಾರ್, ಕಾರ್ಮಿಕ ಘಟಕದ ಮಣಿಕಂಠ, ನೆಲ್ಲಿಹುದಿಕೇರಿ ಘಟಕದ ಅಧ್ಯಕ್ಷ ಹರೀಶ್, ಕಾರ್ಯದರ್ಶಿ ನಂದ, ಬಾಲಕೃಷ್ಣ, ನಂಜಪ್ಪ, ರಮೇಶ್ ಹಾಗೂ ಕಾರ್ತಿಕ್, ಮುಖ್ಯ ಶಿಕ್ಷಕಿ ವಸಂತಿ, ಸಹ ಶಿಕ್ಷಕಿ ಸಂದ್ಯಾ ಅವರುಗಳು ಉಪಸ್ಥಿತರಿದ್ದರು.