ಮಡಿಕೇರಿ, ಜೂ. ೧೪: ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ದ್ವಿತೀಯ ಪಿಯುಸಿಗೆ ರೂ. ೨೦ ಸಾವಿರ, ಪದವಿಗೆ ರೂ. ೨೫ ಸಾವಿರ, ಯಾವುದೇ ಪೋಸ್ಟ್ ಗ್ರಾö್ಯಜುವೇಟ್ ಕೋರ್ಸ್ ಎಂ.ಎ, ಎಂ.ಎಸ್ಸಿ. ಇತ್ಯಾದಿ ರೂ. ೩೦ ಸಾವಿರ ಮತ್ತು ಕೃಷಿ, ಇಂಜಿನಿಯರಿAಗ್, ವೆಟರ್ನರಿ, ಮೆಡಿಸಿನ್‌ಗೆ ರೂ. ೩೫ ಸಾವಿರ ಪ್ರೋತ್ಸಾಹಧನ ನೀಡಲಾಗುತ್ತದೆ.

ವಿದ್ಯಾರ್ಥಿಗಳು ದ್ವಿತೀಯ/ಅಂತಿಮ ವರ್ಷದ ಪಿಯುಸಿ.ಯನ್ನು ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರಬೇಕು. ಸಿಬಿಎಸ್‌ಸಿ ಮತ್ತು ಐಸಿಎಸ್‌ಇ ವತಿಯಿಂದ ನಡೆಸಲಾಗುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರೂ ಸಹ ಈ ಯೋಜನೆಯಡಿಯಲ್ಲಿ ಪ್ರೋತ್ಸಾಹ ಧನವನ್ನು ಪಡೆಯಲು ಅರ್ಹರಿರುತ್ತಾರೆ.

ಪದವಿ/ ಸ್ನಾತಕೋತ್ತರ ಪದವಿ/ ಕೃಷಿ/ ಪಶುಸಂಗೋಪನೆ/ ಇಂಜಿನಿಯರಿAಗ್/ ಮೆಡಿಕಲ್ ಕೋರ್ಸುಗಳಿಗೆ ಸಂಬAಧಿಸಿದAತೆ ಪ್ರತಿ ವರ್ಷ ಪ್ರಥಮ ಪ್ರಯತ್ನದಲ್ಲಿ ಪಾಸಾಗಿರಬೇಕು ಮತ್ತು ಅಂತಿಮ ವರ್ಷದ ತರಗತಿಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು, ಈ ಕೋರ್ಸ್ಗಳಿಗೆ ಸೆಮಿಸ್ಟರ್ ಪದ್ಧತಿ ಇದ್ದಲ್ಲಿ ಎಲ್ಲಾ ಸೆಮಿಸ್ಟರ್‌ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪಾಸಾಗಿರಬೇಕು ಮತ್ತು ಅಂತಿಮ ವರ್ಷದ ತರಗತಿಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು. ಎಲ್ಲಾ ಕೋರ್ಸುಗಳಲ್ಲಿ ಪ್ರತಿ ವರ್ಷದ ಪರೀಕ್ಷೆ ಅಥವಾ ಸೆಮಿಸ್ಟರ್‌ಗಳಲ್ಲಿ ಕಂಪಾರ್ಟ್ಮೆAಟಲ್/ಕ್ಯಾರಿ ಓವರ್ ಸಿಸ್ಟಮ್‌ನಡಿ ಪಾಸಾಗಿದ್ದರೆ ಅಂತಹವರು ಬಹುಮಾನ ಹಣ ಪಡೆಯಲು ಅರ್ಹರಿರುವುದಿಲ್ಲ.

ಕರ್ನಾಟಕ ರಾಜ್ಯದ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳು ಈ ಕೋರ್ಸುಗಳನ್ನು ಹೊರ ರಾಜ್ಯಗಳಲ್ಲಿ ವ್ಯಾಸಂಗ ಮಾಡಿದ್ದರೂ ಸಹ ಅರ್ಹರಾಗಿರುತ್ತಾರೆ. ಆದರೆ ಹೊರ ದೇಶಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಈ ಯೋಜನೆಯಡಿ ಬಹುಮಾನ ಹಣ ಪಡೆಯಲು ಅರ್ಹರಲ್ಲ.

ರಾಜ್ಯ/ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಯು.ಜಿ.ಸಿ ಯಿಂದ ಪಡೆದ ಡೀಮ್ಸ್ ವಿಶ್ವ ವಿದ್ಯಾಲಯಗಳಡಿ ಬರುವ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಸ್ವಾಯತ್ತ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಿರುತ್ತಾರೆ. ಸರ್ಕಾರದಿಂದ ಮಾನ್ಯತೆ ಪಡೆಯದಿರುವ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಈ ಯೋಜನೆಯಡಿ ಅರ್ಹರಿರುವುದಿಲ್ಲ.

ವಿದ್ಯಾರ್ಥಿಯು ವ್ಯಾಸಂಗ ಮಾಡಿದ ಶೈಕ್ಷಣಿಕ ಸಂಸ್ಥೆ ಯಾವ ಜಿಲ್ಲೆಯಲ್ಲಿ ಇರುತ್ತದೆಯೋ ಅದೇ ಜಿಲ್ಲೆಯ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಇವರಿಗೆ ಅರ್ಜಿ ಸಲ್ಲಿಸಬೇಕು. ಹೊರ ರಾಜ್ಯಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ವ್ಯಾಸಂಗ ಮಾಡಿದ ಜಿಲ್ಲೆಯಲ್ಲಿಯೇ ಅರ್ಜಿ ಸಲ್ಲಿಸಬೇಕು.

ಆನ್‌ಲೈನ್ ಅರ್ಜಿ ಸಲ್ಲಿಸಲು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅಭ್ಯರ್ಥಿಯ ಫೋಟೋ, ದ್ವಿತೀಯ ಪಿಯುಸಿ ಅಂಕಪಟ್ಟಿ, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಆಧಾರ್ ಪ್ರತಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕ ಸಲ್ಲಿಸಬೇಕು.

ಪದವಿ, ಸ್ನಾತಕೋತ್ತರ ಪದವಿ, ಕೃಷಿ, ಪಶುಸಂಗೋಪನೆ, ಇಂಜಿನಿಯರಿAಗ್, ಮೆಡಿಕಲ್‌ವಿದ್ಯಾರ್ಥಿಗಳಿಗೆ ಫೋಟೋ, ಎಲ್ಲಾ ಸೆಮ್‌ಗಳ ಅಂಕಪಟ್ಟಿ, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಆಧಾರ್ ಪ್ರತಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕ ಈ ದಾಖಲಾತಿಗಳನ್ನು ಸಲ್ಲಿಸಬೇಕು.

ವಿದ್ಯಾರ್ಥಿಗಳು ತಿತಿತಿ.ಣತಿ.ಞಚಿಡಿ.ಟಿiಛಿ.iಟಿ ನಲ್ಲಿ ಆನ್‌ಲೈನ್ ಅರ್ಜಿ ಸಲ್ಲಿಸುವಾಗ ಯಾವುದಾದರೂ ತಾಂತ್ರಿಕ ತೊಂದರೆಯಾದಲ್ಲಿ ಇಲಾಖೆಯ ಟೋಲ್‌ಫ್ರೀ ದೂರವಾಣಿ ಸಂಖ್ಯೆ ೦೮೦-೨೨೬೩೪೩೦೦, ೦೮೦-೨೨೩೫೩೭೫೭ ಅಥವಾ ಸಹಾಯಕ ನಿರ್ದೇಶಕರು (ಗ್ರೇಡ್-೨) ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆರವರ ದೂರವಾಣಿ ಸಂಖ್ಯೆ ೯೪೮೦೮೪೩೧೫೬ ಮತ್ತು ೦೮೨೭೬-೨೮೧೧೧೫ ಅನ್ನು ಸಂಪರ್ಕಿಸಬಹುದು ಎಂದು ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-೨) ತಿಳಿಸಿದ್ದಾರೆ.