ಚೆಯ್ಯಂಡಾಣೆ: ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶಶಿ ಅಚ್ಚಪ್ಪ ಅವರು ಪ್ರತಿ ವರ್ಷದಂತೆ ಈ ವರ್ಷವೂ ನೋಟ್‌ಬುಕ್‌ಗಳನ್ನು ವಿತರಿಸಿದರು.

ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಆಯೋಜಿಸ ಲಾದ ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ನೋm ï‌ಬುಕ್‌ಗಳನ್ನು ವಿತರಿಸಲಾಯಿತು. ಹಲವು ವರ್ಷಗಳಿಂದ ನಿರಂತರವಾಗಿ ಶಾಲಾ ಮಕ್ಕಳಿಗೆ ಶೈಕ್ಷಣಿಕ ನೆರವು ನೀಡುತ್ತಿರುವ ಶಶಿ ಅಚ್ಚಪ್ಪ ಅವರ ಸಮಾಜಮುಖಿ ಕಾರ್ಯವನ್ನು ಶಾಲಾ ಆಡಳಿತ ಮಂಡಳಿ ಹಾಗೂ ಪೋಷಕರು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಕಮಲಮ್ಮ, ಸಹ ಶಿಕ್ಷಕಿ ಕಮರುನ್ನಿಸ ಹಾಗೂ ಅಡುಗೆ ಸಿಬ್ಬಂದಿ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.