ಮಡಿಕೇರಿ, ಜೂ. ೧೪: ಅರುವತ್ತೊಕ್ಕಲು ಸರ್ವದೈವತಾ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಆಡಳಿತ ಮಂಡಳಿಯ ಅಧ್ಯಕ್ಷರಾದ ಕಾಡ್ಯಮಾಡ ಪ್ರಕಾಶ್ ಮೊಣ್ಣಪ್ಪ, ಪ್ರಾಂಶುಪಾಲರಾದ ಶೀಲಾ ಬೋಪಣ್ಣ, ಕಚೇರಿ ವ್ಯವಸ್ಥಾಪಕರಾದ ಪರ್ವೀನ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಮೋದ್ ಗೌಡ ಸಸಿಗಳಿಗೆ ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಪ್ರಕಾಶ್ ಅವರು, ಪರಿಸರ ಸಂರಕ್ಷಣೆಯ ಮಹತ್ವವನ್ನು ತಿಳಿಸಿದರು. ಉಪನ್ಯಾಸಕಿ ವೇದಾಂತಿ ಪರಿಚಯ ನುಡಿಗಳನ್ನಾಡಿದರು. ಎಂಟನೇ ತರಗತಿ ವಿದ್ಯಾರ್ಥಿನಿಯರಿಂದ ಪರಿಸರ ಗೀತೆ, ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಪರಿಸರ ದಿನದ ಮಹತ್ವದ ಕುರಿತು ಭಾಷಣ ಹಾಗೂ ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿನಿಯರಿಂದ ನೃತ್ಯ ಕಾರ್ಯಕ್ರಮಗಳು ನಡೆದವು.

ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಎಲ್‌ಕೆಜಿ ವಿದ್ಯಾರ್ಥಿಗಳು ಪ್ರಾಂಶುಪಾಲರೊAದಿಗೆ ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ ಸಾರಿದರು. ಕಾರ್ಯಕ್ರಮದ ನಿರೂಪಣೆ ಮತ್ತು ವಂದನಾರ್ಪಣೆಯನ್ನು ವಿದ್ಯಾರ್ಥಿನಿ ಸಫ್ವಾನ ನೆರವೇರಿಸಿದರು.