ಸೋಮವಾರಪೇಟೆ, ಜೂ. ೧೪: ತಾಲೂಕು ಅಭಿವೃದ್ಧಿ ಹೋರಾಟ ಸಮಿತಿಯಿಂದ ತಾ. ೧೫ ರಂದು (ಇಂದು) ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ಶಾಸಕ ಡಾ. ಮಂತರ್ ಗೌಡ ಅವರ ಉಪಸ್ಥಿತಿಯಲ್ಲಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಇಲಾಖಾಧಿಕಾರಿಗಳನ್ನು ಒಳಗೊಂಡAತೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಡಿ.ಕೆ. ಅರುಣ್ ಕುಮಾರ್ ತಿಳಿಸಿದ್ದಾರೆ.

ಬೆಳಿಗ್ಗೆ ೧೦.೩೦ಕ್ಕೆ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯುವ ಸಂವಾದ ಕಾರ್ಯಕ್ರಮವನ್ನು ಶಾಸಕ ಡಾ. ಮಂತರ್ ಗೌಡ ಅವರು ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ. ಸಿಇಓ, ಡಿಎಫ್‌ಓ, ತಹಶೀಲ್ದಾರ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳು ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ ರೈತರು, ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಂವಾದ ನಡೆಯಲಿದೆ. ಇದರೊಂದಿಗೆ ಅಭಿವೃದ್ಧಿ ಕಾರ್ಯಗಳ ಬಗ್ಗೆಯೂ ಚರ್ಚೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಮುಖವಾಗಿ ಮಾದಾಪುರವನ್ನು ಹೋಬಳಿ ಕೇಂದ್ರವನ್ನಾಗಿಸುವ ಪ್ರಸ್ತಾಪ, ಸೋಮವಾರಪೇಟೆ ಯೋಜನಾ ಪ್ರಾಧಿಕಾರ, ಮೂಡಾ, ಸ್ವಚ್ಛತೆ, ಶಿಕ್ಷಣ ಕ್ಷೇತ್ರದ ಬೆಳವಣಿಗೆ, ಆರ್‌ಟಿಓ ಇಲಾಖಾ ಸಮಸ್ಯೆಗಳು, ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆ, ಲೋಕೋಪಯೋಗಿ ಹಾಗೂ ಜಿ.ಪಂ. ರಸ್ತೆಗಳ ಅಭಿವೃದ್ಧಿ, ರಾಜ್ಯ ಹೆದ್ದಾರಿಗಳ ಪ್ರಸ್ತಾಪ, ಕೃಷಿ ಹಾಗೂ ತೋಟಗಾರಿಕೆ, ಪಶು ವೈದ್ಯಕೀಯ, ಪೊಲೀಸ್, ಆಸ್ಪತ್ರೆ, ಸೆಸ್ಕಾಂ, ಪ್ರವಾಸೋದ್ಯಮ, ಕಂದಾಯ, ಅರಣ್ಯ ಇಲಾಖೆಗೆ ಸಂಬAಧಿಸಿದAತೆ ಅಧಿಕಾರಿಗಳೊಂದಿಗೆ ಸಂವಾದ ನಡೆಯಲಿದೆ ಎಂದು ತಿಳಿಸಿದ್ದಾರೆ. ಸಂವಾದ ಕಾರ್ಯಕ್ರಮದಲ್ಲಿ ಅಧಿಕಾರಿಗಳು, ಸಾಮಾಜಿಕ ಸಂಘಟನೆಗಳು, ಜನಸಾಮಾನ್ಯರು ಭಾಗವಹಿಸಲಿದ್ದಾರೆ. ಜನಸಾಮಾನ್ಯರು ತಮ್ಮ ಅಹವಾಲುಗಳನ್ನು ಸಲ್ಲಿಸಲು ಸೋಮವಾರಪೇಟೆ ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ವೇದಿಕೆ ಸೃಷ್ಟಿಸಿದೆ. ಕಾರ್ಯಕ್ರಮದಲ್ಲಿ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಉತ್ತಮ ಸೇವೆ ಸಲ್ಲಿಸಿದ ವ್ಯಕ್ತಿಗಳನ್ನು ಗುರುತಿಸಿ ಸನ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.