ಚೆಟ್ಟಳ್ಳಿ, ಜೂ. ೧೪: ವೀರಾಜಪೇಟೆಯ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕ-ಶಿಕ್ಷಕರ ಸಭೆ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಎಂ.ಕೆ. ಪದ್ಮ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಮಕ್ಕಳಿಗೆ ಹೆಚ್ಚಿನ ಸಮಯವನ್ನು ಮೀಸಲಿಡಬೇಕು ಹಾಗೂ ಮೊಬೈಲ್ ಬಳಕೆಯನ್ನು ನಿಯಂತ್ರಿಸಬೇಕು ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿ ಶಿಕ್ಷಕರಷ್ಟೇ ಪೋಷಕರ ಜವಾಬ್ದಾರಿಯೂ ಪ್ರಮುಖವಾಗಿದ್ದು, ಕಾಲೇಜಿನ ವಿವಿಧ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.
ಕನ್ನಡ ಉಪನ್ಯಾಸಕಿ ಎಂ.ಪಿ. ದಮಯಂತಿ ಅವರು ಪ್ರಸಕ್ತ ಶೈಕ್ಷಣಿಕ ವರ್ಷದ ಚಟುವಟಿಕೆಗಳು ಹಾಗೂ ಪರೀಕ್ಷಾ ಸಂಬAಧಿತ ವಿಷಯಗಳ ಕುರಿತು ಮಾಹಿತಿ ನೀಡಿದರು.
ಆಪ್ತ ಸಮಾಲೋಚಕಿ ಲೋಚನಾ ಅವರು ಮಕ್ಕಳ ಮನಸ್ಸು ಸೂಕ್ಷö್ಮವಾಗಿರುವುದರಿಂದ ಅವರನ್ನು ಪ್ರೀತಿ ಹಾಗೂ ಕಾಳಜಿಯಿಂದ ನೋಡಿಕೊಳ್ಳುವುದು ಅಗತ್ಯ ಎಂದು ಹೇಳಿದರು. ಮಕ್ಕಳು ತಪ್ಪು ದಾರಿಗೆ ಹೋದರೆ ಅವರನ್ನು ಬೈಯುವುದಕ್ಕಿಂತ ಪ್ರೀತಿಯಿಂದ ಮಾತನಾಡಿ ಅವರ ಮನಸ್ಸನ್ನು ಗೆಲ್ಲಬೇಕು. ಇದರಿಂದ ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ರೂಪಿಸಲು ಸಾಧ್ಯವಾಗುತ್ತದೆ ಎಂದು ಮನೋವೈಜ್ಞಾನಿಕ ಅರಿವು ಮೂಡಿಸಿದರು.
ಪೋಷಕರಾದ ಅಸೀರ್ ಮಾತನಾಡಿ, ಕಾವೇರಿ ಕಾಲೇಜಿನಲ್ಲಿ ಶಿಕ್ಷಣದ ಜೊತೆಗೆ ಎನ್ಎಸ್ಎಸ್, ಎನ್ಸಿಸಿ, ಕ್ರೀಡೆ, ಪಠ್ಯೇತರ ಚಟುವಟಿಕೆಗಳು, ವಿವಿಧ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೆಚ್ಚಿನ ಅವಕಾಶಗಳಿದೆ ಎಂದು ಅಭಿಪ್ರಾಯಪಟ್ಟರು.
ಸಭೆಯಲ್ಲಿ ಪೋಷಕರು ಹಾಗೂ ಉಪನ್ಯಾಸಕರ ನಡುವೆ ಮುಕ್ತ ಸಂವಾದ ನಡೆಯಿತು. ಕಾಲೇಜಿನ ಅಭಿವೃದ್ಧಿಗೆ ಸಂಬAಧಿಸಿದAತೆ ಪೋಷಕರು ತಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಹಂಚಿಕೊAಡರು.
ಈ ಸಂದರ್ಭ ಶಿಕ್ಷಕ-ಪೋಷಕ ಸಂಘದ ನೂತನ ಉಪಾಧ್ಯಕ್ಷರಾಗಿ ಸುಗಂಧಿ, ಕಾರ್ಯದರ್ಶಿಯಾಗಿ ಚೋಕಂಡ ಮಾದಪ್ಪ ಹಾಗೂ ಸದಸ್ಯರಾಗಿ ಶಿಲ್ಪಾ, ಅನಿತಾ ಮತ್ತು ಸ್ಟೀಫನ್ ಆಯ್ಕೆಯಾದರು.
ಸಭೆಯಲ್ಲಿ ಉಪನ್ಯಾಸಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕುಮಾರಿ ಕಾವ್ಯ ಮತ್ತು ತಂಡದವರು ಪ್ರಾರ್ಥಿಸಿದರು. ಶಿಕ್ಷಕ-ಪೋಷಕ ಸಂಘದ ಸಂಚಾಲಕಿ ಡೈನಾ ಸೋಮಯ್ಯ ಸ್ವಾಗತಿಸಿದರು. ಉಪನ್ಯಾಸಕಿ ಗಾಯತ್ರಿ ವಂದಿಸಿದರು. ಉಪನ್ಯಾಸಕಿಯರಾದ ಅನುಪಮ ತಿಮ್ಮಯ್ಯ ಹಾಗೂ ಪ್ರೇಮಾಂಜಲಿ ಕಾರ್ಯಕ್ರಮ ನಿರೂಪಿಸಿದರು.