ವೀರಾಜಪೇಟೆ, ಜೂ. ೧೪: ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಮತ್ತು ನಿತ್ಯೋಪಯೋಗಿ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘ ಮತ್ತು ಡಿವೈಎಫ್‌ಐ ಸಂಯುಕ್ತ ಆಶ್ರಯದಲ್ಲಿ ವೀರಾಜಪೇಟೆಯ ಗಡಿಯಾರ ಕಂಬದ ಮುಂಭಾಗ ಪ್ರತಿಭಟನೆ ನಡೆಯಿತು.
ಈ ಸಂದರ್ಭ ಮಾತನಾಡಿದ ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಪಿ.ಆರ್. ಭರತ್, ಕೇಂದ್ರ ಸರಕಾರ ನಿರಂತರವಾಗಿ ಹೆಚ್ಚಿಸುತ್ತಿರುವ ಅಡುಗೆ ಅನಿಲ ಹಾಗೂ ಪೆಟ್ರೋಲ್ ಡಿಸೇಲ್ ಬೆಲೆ ಗಗನಕ್ಕೆ ಏರಿದ್ದು ಜನ ಸಾಮಾನ್ಯರು ತೊಂದರೆಗೆ ಒಳಗಾಗಿದ್ದಾರೆ ಎಂದರು.
ಪ್ರತಿಭಟನೆಯಲ್ಲಿ ಅಖಿಲ ಭಾರತ ಜನವಾದಿ ಮಹಿಳಾ ಸಂಘದ ರಾಜ್ಯ ಸಮಿತಿ ಸದಸ್ಯೆ ಹಾಗೂ ಜಿಲ್ಲಾ ಸಂಚಾಲಕ ಸಮಿತಿ ಸದಸ್ಯೆ ಪದ್ಮಿನಿ ಶ್ರೀಧರ್, ಡಿವೈಎಫ್‌ಐ ಕೊಡಗು ಜಿಲ್ಲಾ ಖಜಾಂಚಿ ಸಾಧಿಕ್ ಎ.ಹೆಚ್., ಸಿಐಟಿಯು ಜಿಲ್ಲಾ ಸಮಿತಿ ಸದಸ್ಯರಾದ ಕೆ.ಎಸ್. ರಮೇಶ್, ಖಾಸಿಂ, ಆದಿವಾಸಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಪಿ.ಕೆ. ರಮೇಶ್, ಅಧ್ಯಕ್ಷರಾದ ಜಿ.ಆರ್. ಪ್ರೇಮ, ಖಜಾಂಚಿ ಭಾಗ್ಯ ಚಂಗಪ್ಪ, ಜಿಲ್ಲಾ ಮುಖಂಡರಾದ ಪುಷ್ಪ, ರವಿ ಸೇರಿದಂತೆ ಹಲವು ಕಾರ್ಯಕರ್ತರು ಭಾಗವಹಿಸಿದ್ದರು.