ಮಡಿವಾಳ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧಿತ
ಕೋವರ್‌ಕೊಲ್ಲಿ ಇಂದ್ರೇಶ್
ಬೆAಗಳೂರು, ಜೂ. ೧೪: ೨೦೦೮ರ ಮಡಿವಾಳ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ವೀರಾಜಪೇಟೆ ಮೂಲದ ಅಬ್ದುಲ್ ಖಾದರ್ (೬೦) ಶುಕ್ರವಾರ ಅನಾರೋಗ್ಯದ ಕಾರಣದಿಂದ ಮೃತಪಟ್ಟಿದ್ದಾನೆ. ಈತ ಮಡಿವಾಳ ಬಾಂಬ್ ಸ್ಫೋಟ ಪ್ರಕರಣದ ಸಂಬAಧ ೨೦೧೦ ರಲ್ಲಿ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ. ಅಂದಿನಿAದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಅಬ್ದುಲ್ ಖಾದರ್‌ಗೆ ಜೂನ್ ೧೨ ರಂದು ಏಕಾಏಕಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಅಬ್ದುಲ್‌ನನ್ನು ಜಯದೇವ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ, ಮಾರ್ಗಮಧ್ಯೆ ಹೃದಯಾಘಾತದಿಂದ ಅಬ್ದುಲ್ ಖಾದರ್ ಮೃತಪಟ್ಟಿದ್ದಾನೆ.
ಅತಿಯಾದ ಮಧುಮೇಹ, ಮೂತ್ರಪಿಂಡ (ಕಿಡ್ನಿ) ವೈಫಲ್ಯ ಮತ್ತು ಕಣ್ಣುಗಳ ದೃಷ್ಟಿನಷ್ಟ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಂದ ಆತ ತೀವ್ರವಾಗಿ ಬಳಲುತ್ತಿದ್ದ. ೨೦೨೦ ರಲ್ಲಿ ಆತನ ಎಡಗಾಲನ್ನು ಶಸ್ತçಚಿಕಿತ್ಸೆ ಮೂಲಕ ಕತ್ತರಿಸಬೇಕಾಗಿ ಬಂದಿದ್ದರಿAದ, ಅಂದಿನಿAದ ವೀಲ್‌ಚೇರ್‌ನಲ್ಲೇ ಇರಬೇಕಿತ್ತು. ಮಧುಮೇಹ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಮೂತ್ರಪಿಂಡಗಳು ಸಂಪೂರ್ಣವಾಗಿ ಹಾನಿಗೊಳಗಾಗಿದ್ದವು, ಜೊತೆಗೆ ಅಧಿಕ ರಕ್ತದೊತ್ತಡ ಮತ್ತು ಇತರ ಸಂಬAಧಿತ ಕಾಯಿಲೆಗಳೂ ಕಾಡುತ್ತಿದ್ದವು. ಈತನ ಶವ ಪರೀಕ್ಷೆಯನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆಸಿ ಸಂಬAಧಿಕರಿಗೆ ನೀಡಲಾಗಿದೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.
ವಿಶೇಷ ನ್ಯಾಯಾಲಯ ಮತ್ತು ಹೈಕೋರ್ಟ್ನಲ್ಲಿ ಒಟ್ಟು ೬ ಬಾರಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರೂ, ಪ್ರತಿ ಬಾರಿಯೂ ಅದನ್ನು ತಿರಸ್ಕರಿಸಲಾಗಿತ್ತು. ಅಬ್ದುಲ್ ಖಾದರ್ ವಿರುದ್ಧದ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ಅಂತಿಮ ಹಂತದಲ್ಲಿದ್ದು, ಇನ್ನೂ ಕೆಲವೇ ದಿನಗಳಲ್ಲಿ ತೀರ್ಪು ಪ್ರಕಟವಾಗುವ ಸಾಧ್ಯತೆ ಇತ್ತು. ಆದರೆ ನ್ಯಾಯಾಲಯದ ತೀರ್ಪು ಹೊರಬೀಳುವ ಮುನ್ನವೇ ಅಬ್ದುಲ್ ಖಾದರ್ ಕೊನೆಯುಸಿರೆಳೆದಿದ್ದಾನೆ. ಮೂಲತಃ ವೀರಾಜಪೇಟೆ ನಿವಾಸಿಯಾಗಿದ್ದ ಅಬ್ದುಲ್ ಖಾದರ್, ೨೦೦೮ರ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿದ್ದ. ಈ ಸಂಬAಧ ರಾಷ್ಟಿçÃಯ ತನಿಖಾ ದಳ (ಓIಂ) ಅಬ್ದುಲ್ ಖಾದರ್‌ನನ್ನು ಬಂಧಿಸಿತ್ತು.
೨೦೦೮ ರ ಜುಲೈ ೨೫ ರಂದು ಮಡಿವಾಳ ಬಸ್ ಡಿಪೋದ ಸಮೀಪದಲ್ಲಿ ಶುಕ್ರವಾರ ಮಧ್ಯಾಹ್ನ ೧.೨೦ ಘಂಟೆಗೆ ಮೊದಲ ಬಾಂಬ್ ಸ್ಫೋಟ ನಡೆಸಲಾಗಿತ್ತು. ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್ ಏ ತೊಯ್ಬಾದ ಬೆಂಬಲದೊAದಿಗೆ ಭಾರತದ ನಿಷೇಧಿತ ಉಗ್ರ ಸಂಘಟನೆ ಸ್ಟುಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ (ಸಿಮಿ) ಸದಸ್ಯರು ನಡೆಸಿದ್ದ ಈ ಸರಣಿ ಸ್ಫೋಟವನ್ನು ಮಹಾನಗರದ ವಿವಿಧೆಡೆಗಳಲ್ಲಿ ೨.೪೦ ರವರೆಗೂ ೮ ಕಡೆಗಳಲ್ಲಿ ನಡೆಸಲಾಗಿತ್ತು. ಇದರಲ್ಲಿ ಓರ್ವ ಮೃತಪಟ್ಟು ೨೦ ಜನರು ಗಂಭೀರವಾಗಿ ಗಾಯಗೊಂಡಿದ್ದರು.
ಈ ಪ್ರಕರಣಕ್ಕೆ ಸಂಬAಧಿಸಿದAತೆ ಸಂಚು ನಡೆಸಿ ಬೆಂಬಲಿಸಿದ ಆರೋಪದಲ್ಲಿ ಸೋಮವಾರಪೇಟೆ ತಾಲೂಕಿನ ಹೊಸತೋಟದಲ್ಲಿ ಶುಂಠಿ ಕೃಷಿಯ ನೆಪದಲ್ಲಿ ಅಡಗುದಾಣ ಮಾಡಿಕೊಂಡಿದ್ದ ತಡಿಯಂಟವಿಡೆ ನಸೀರ್ ಎಂಬಾತನನ್ನು ೨೦೧೦ ರಲ್ಲಿ ಭಾರತ - ಬಾಂಗ್ಲಾ ಗಡಿಯಲ್ಲಿ ಭಾರತೀಯ ಸೇನೆ ಬಂಧಿಸಿತ್ತು. ಆತ ಹಾಗೂ ಆತನ ಸಹಚರರು ಈಗಲೂ ಜೈಲಿನಲ್ಲಿ ವಿಚಾರಣಾಧೀನ ಖೈದಿಗಳಾಗಿದ್ದಾರೆ.